Ad Widget .

ಕನ್ನಡಿಗ ನ್ಯಾ.ಅರವಿಂದ್ ಕುಮಾರ್ ಹೆಸರು ಗುಜರಾತ್ ಹೈಕೋರ್ಟ್ ಮು.ನ್ಯಾ. ಸ್ಥಾನಕ್ಕೆ ಶಿಫಾರಸು

ನವದೆಹಲಿ: ಸುಪ್ರೀಂಕೋರ್ಟ್ ಕೊಲಿಜಿಯಂ 8 ಹೈಕೋಟ್‍ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಹೆಸರುಗಳನ್ನು ಶಿಫಾರಸು ಮಾಲಾಗಿದ್ದು, ಈ ಪಟ್ಟಿಯಲ್ಲಿ ರಾಜ್ಯ ಹೈಕೋಟ್‍ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗರಾದ ನ್ಯಾ. ಅರವಿಂದ್ ಕುಮಾರ್ ಹೆಸರು ಕೂಡ ಇದ್ದು ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸೆಪ್ಟೆಂಬರ್ 16 ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದಲ್ಲಿ ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದೀಗ ಗುಜರಾತ್ ಹೈಕೋರ್ಟ್ ಮುಖ್ಯ ನಾಯಮೂರ್ತಿ ಸ್ಥಾನಕ್ಕೆ ಕನ್ನಡಿಗರಾದ ನ್ಯಾ.ಅರವಿಂದ್ ಕುಮಾರ್ ನೇಮಕವಾಗುವ ಸಾಧ್ಯತೆ ಇದೆ.

Ad Widget . Ad Widget . Ad Widget .

ನ್ಯಾ.ಅರವಿಂದ್ ಕುಮಾರ್, 1987 ರಲ್ಲಿ ವಕೀಲರಾಗಿ ಸೇವೆ ಆರಂಭಿಸಿ, 4 ವರ್ಷಗಳ ಕಾಲ ಸಿವಿಲ್ ನ್ಯಾಯಾಲಯಗಳು, ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳು, ಮೇಲ್ಮನವಿ ನ್ಯಾಯಮಂಡಳಿಗಳಲ್ಲಿ ಕಾರ್ಯ ನಿರ್ವಹಿಸದರು. ಬಳಿಕ ಅವರು ಹೈಕೋಟ್‍ನಲ್ಲಿ ತಮ್ಮ ವಕೀಲಿ ವೃತ್ತಿ ಮುಂದುವರಿಸಿದರು. 1999 ರಲ್ಲಿ ರಾಜ್ಯ ಹೈಕೋಟ್‍ನಲ್ಲಿ ಹೆಚ್ಚುವರಿ ಕೇಂದ್ರ ಸರ್ಕಾರದ ಸ್ಥಾಯಿ ಸಲಹೆಗಾರರಾಗಿ ನೇಮಕಗೊಂಡಿದ್ದರು.

2002ರಲ್ಲಿ ಪ್ರಾದೇಶಿಕ ನೇರ ತೆರಿಗೆ ಸಲಹಾ ಸಮಿತಿಯ ಸದಸ್ಯರಾಗಿ ನೇಮಕಗೊಂಡ ಬಳಿಕ ಅವರು, ಆದಾಯ ತೆರಿಗೆ ಇಲಾಖೆಗೆ ಸ್ಥಾಯಿ ಸಲಹೆಗಾರರಾಗಿ ನೇಮಕವಾದರು. ಸುಧೀರ್ಘ ಅನುಭವದ ಬಳಿಕ 2005 ರಲ್ಲಿ ದೇಶದ ಅಡಿಷನಲ್ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡರು. 2009ರಂದು ಕರ್ನಾಟಕ ಹೈಕೋಟ್‍ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕವಾದ ಅವರು 2012 ರಲ್ಲಿ ಖಾಯಂ ನ್ಯಾಯಾಧೀಶರಾಗಿನೇಮಕಗೊಂಡರು. ಈಗ ಕೊಲಿಜಿಯಂ ಶಿಫಾರಸು ಸರ್ಕಾರದ ಅನುಮೋದಿಸಿದರೇ ಕನ್ನಡಿಗ ನ್ಯಾ.ಅರವಿಂದ್ ಕುಮಾರ್ ಅವರು ಗುಜರಾತ್ ಹೈಕೋಟ್‍ನ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ.

Leave a Comment

Your email address will not be published. Required fields are marked *