Ad Widget .

ಪಾಣತ್ತೂರು ಬಸ್ ದುರಂತ ಪ್ರಕರಣ| ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ಮಂಜೂರು|

ಪುತ್ತೂರು: ಪುತ್ತೂರಿನ ಬಲ್ನಾಡುವಿನಿಂದ ಕೇರಳದ ಪಾಣತ್ತೂರಿಗೆ ಹೊರಟಿದ್ದ ಮದುವೆ ದಿಬ್ಬಣದ ಬಸ್ ಕೇರಳದ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಪಲ್ಟಿಯಾಗಿ ಬಸ್‌ನಲ್ಲಿದ್ದ 7 ಮಂದಿ ದಾರುಣ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿಮೆ ಅವಕಾಶ ಇಲ್ಲದಿದ್ದರೂ ಅಪಘಾತದಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ ಪರಿಹಾರಕ್ಕಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರ ಮನವಿಯಂತೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೃತರ ಕುಟುಂಬಕ್ಕೆ ತಲಾ ರೂ. 2 ಲಕ್ಷ ಪರಿಹಾರವನ್ನು ಮಂಜೂರು ಮಾಡಿದ್ದಾರೆ.

Ad Widget . Ad Widget . Ad Widget .

ಬಸ್ ಅಪಘಾತದಿಂದ ಪುತ್ತೂರು , ಸುಳ್ಯ, ಬಂಟ್ವಾಳದ 7 ಸಂಬಂಧಿಕರೇ ಮೃತಪಟ್ಟಿದ್ದರು. ಬಲ್ನಾಡು ಚನಿಲ ಪಾಲೆಚ್ಚಾರು ಚೋಮ ನಾಯ್ಕರವರ ಪುತ್ರ ರಾಜೇಶ್(38.ವ) ಅವರ ಪುತ್ರ ಆದರ್ಶ(14ವ), ಕುಂಜೂರುಪಂಜ ದೇವಸ್ಯ ನಾರಾಯಣರವರ ಪುತ್ರಿ ಸುಮತಿ(26), ಪಾಣಾಜೆ ಆರ್ಲಪದವು ಅರ್ಧಮೂಲೆ ನಾರಾಯಣರವರ ಪುತ್ರ ಶ್ರೇಯಸ್(13), ಸುಳ್ಯ ಸೋಣಂಗೇರಿ ಜಾಲ್ಸೂರು ಗ್ರಾಮದ ಕುಕ್ಕಂದೂರು ನಾರಾಯಣ ನಾಯ್ಕರವರ ಪುತ್ರ ರವಿಚಂದ್ರ(40) ಬೆಟ್ಟಂಪಾಡಿ ಗ್ರಾಮದ ಅಜ್ಜಿಕಲ್ಲು ಸಮೀಪದ ಕಳೆಂಜಿಲ ವಸಂತ ನಾಯ್ಕ ಪತ್ನಿ ಸೇಸಮ್ಮ ಯನೆ ಜಯಲಕ್ಷ್ಮೀ, ನಿರ್ವಾಹಕ ಬಂಟ್ವಾಳ ನರಿಕೊಂಬು ಶ್ರೀಧರ ಪೂಜಾರಿಯವರ ಪುತ್ರ ಶಶಿಧರ ಮೃತಪಟ್ಟಿದ್ದರು. ಈ ಎಲ್ಲಾ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ಪರಿಹಾರ ಮಂಜೂರು ಮಾಡಲಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *