ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಪೋಟ| ಮೂವರು ದೇಹ ಛಿದ್ರಗೊಂಡು ದಾರುಣ ಸಾವು

Ad Widget ... ..

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಸಿಲಿಂಡರ್ ಸ್ಪೋಟದ ಸದ್ದು ಕೇಳಿಸಿದ್ದು, ಮತ್ತೊಂದು ದುರಂತ ಸಂಭವಿಸಿದೆ. ಮೊನ್ನೆಯಷ್ಟೇ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಇದೀಗ ಅಂಥದ್ದೇ ಮತ್ತೊಂದು ಅವಘಡ ಸಂಭವಿಸಿದೆ.

Ad Widget

ಬೆಂಗಳೂರಿನ ನಗರ್ತಪೇಟೆಯಲ್ಲಿ ಮನೆಯೊಳಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದ್ದು, ಸಿಲಿಂಡರ್ ಸ್ಫೋಟದ ರಭಸಕ್ಕೆ ಮೂವರ ದೇಹ ಛಿದ್ರ ಛಿದ್ರಗೊಂಡಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *