ಪುತ್ತೂರು, ಸೆ.25: ಕರ್ನಾಟಕ ಅರಣ್ಯ ರಬ್ಬರ್ ನಿಗಮದ ನೌಕರರೊಬ್ಬರ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾದ ಬೆಲೆಬಾಳುವ ಮರಗಳನ್ನು ಪುತ್ತೂರು ಅರಣ್ಯ ಇಲಾಖೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದು, ಆರೋಪಿ ಪರಾರಿಯಾದ ಘಟನೆ ನಡೆದಿದೆ.
ಪುತ್ತೂರು ಕೆಎಫ್‌ಡಿಸಿ ಇಲಾಖೆಯ ನೌಕರ, ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ಅರುಣ್ ಕುಮಾರ್ ಎಂಬವರ ಮನೆಯಲ್ಲಿ ಸುಮಾರು ರೂ. 2.5 ಲಕ್ಷಕ್ಕೂ ಅಧಿಕ ಬೆಲೆಯ ಬೀಟೆ, ಹಲಸು, ಸಾಗುವಾನಿ ಹಾಗೂ ಇತರೆ ಜಾತಿಯ ಮರದ ದಿಮ್ಮಿಗಳು ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪುತ್ತೂರು ಅರಣ್ಯ ಇಲಾಖೆ ದಾಳಿ ಮಾಡಿ ಪತ್ತೆ ಹಚ್ಚಿದೆ.
ಅರುಣ್ ಅವರ ಮನೆಗೆ ದಾಳಿ ನಡೆಸಿ ಮರಗಳನ್ನು ಸ್ವಾಧೀನ ಪಡಿಸಿಕೊಂಡು ಅರುಣ್ ಕುಮಾರ್ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಅಧಿಕಾರಿಗಳ ದಾಳಿಯಾಗುತ್ತಿದ್ದಂತೆ ಅರುಣ್ ಕುಮಾರ್ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.