Ad Widget .

ಮುಂಬೈನ ಬಗ್ಗುಬಡಿದ ಬೆಂಗಳೂರು ಹುಡುಗರು| ಆರ್ಸಿಬಿ ಗೆ 55ರನ್ ಜಯ|

ಐಪಿಎಲ್ 2021 ರ 39 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) 54 ರನ್ಗಳಿಂದ ಮುಂಬೈ ಇಂಡಿಯನ್ಸ್ (ಎಂಐ) ತಂಡವನ್ನು ಸೋಲಿಸಿತು. ಹರ್ಷಲ್ ಪಟೇಲ್ ಹ್ಯಾಟ್ರಿಕ್ ಪಡೆದರು ಮತ್ತು ಇಡೀ ಆಟವನ್ನು ಆರ್ಸಿಬಿ ಕಡೆಗೆ ತಿರುಗಿಸಿದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ (51 ರನ್) ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ (56 ರನ್) ಗಳ ಅರ್ಧ ಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಆರು ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಶ್ರೀಕರ್ ಭಾರತ್ 32 ರನ್ ಕೊಡುಗೆ ನೀಡಿದರು. ಮುಂಬೈ ಇಂಡಿಯನ್ಸ್ ಪರ ಜಸ್ಪ್ರೀತ್ ಬುಮ್ರಾ ಮೂರು ವಿಕೆಟ್ ಪಡೆದರೆ, ಟ್ರೆಂಟ್ ಬೌಲ್ಟ್, ಆಡಮ್ ಮಿಲ್ನೆ ಮತ್ತು ರಾಹುಲ್ ಚಾಹರ್ ತಲಾ ಒಂದು ವಿಕೆಟ್ ಪಡೆದರು.

Ad Widget . Ad Widget . Ad Widget .

ಗುರಿ ಬೆನ್ನತ್ತಿದ ಮುಂಬೈನ ರೋಹಿತ್ ಶರ್ಮಾ ಮತ್ತು ಕ್ವಿಂಟನ್ ಡಿ ಕಾಕ್ ಮುಂಬೈ ಇಂಡಿಯನ್ಸ್ ತಂಡದ ಇನ್ನಿಂಗ್ಸ್ ಆರಂಭಿಸಿದರು. ಇಬ್ಬರೂ ವೇಗವಾಗಿ ರನ್ ಸೇರಿಸಿದರು ಮತ್ತು 5 ಓವರ್‌ಗಳಲ್ಲಿ ಮುಂಬೈ ಇಂಡಿಯನ್ಸ್ ಸ್ಕೋರ್ 50 ರನ್ ತಲುಪಿತು. ಡಿ ಕಾಕ್ 23 ಎಸೆತಗಳಲ್ಲಿ 4 ಬೌಂಡರಿಗಳ ಸಹಾಯದಿಂದ 24 ರನ್ ಗಳಿಸಿ ಔಟಾದರು. ನಂತರ ರೋಹಿತ್ 28 ಎಸೆತಗಳಲ್ಲಿ 4 ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 43 ರನ್ ಗಳಿಸಿ ಮರಳಿದರು. ಅಂದಿನಿಂದ, ಮುಂಬೈ ಇಂಡಿಯನ್ಸ್ ಇನ್ನಿಂಗ್ಸ್ ಕುಂಠಿತಗೊಂಡಿತು.

ಕೊಹ್ಲಿ ಆರಂಭದಿಂದಲೇ ಆಕ್ರಮಣಶೀಲತೆಯನ್ನು ತೋರಿಸಿದರು ಮತ್ತು ಟ್ರೆಂಟ್ ಬೌಲ್ಟ್ ಮೇಲೆ ಇನ್ನಿಂಗ್ಸ್​ನ ಎರಡನೇ ಎಸೆತದಲ್ಲಿ ಸಿಕ್ಸರ್ ಹೊಡೆದರು. ಪಡಿಕಲ್ ಬೇಗ ಔಟಾದರೂ ಸಹ ನಂತರ ಬಂದ ಭರತ್ ಮತ್ತು ಮ್ಯಾಕ್ಸ್​ವೆಲ್ ಕೊಹ್ಲಿ ಜೊತೆ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಜಸ್‌ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್‌ಗೆ ಮೊದಲ ಯಶಸ್ಸನ್ನು ನೀಡಿದರು. ಮುಂಬೈ ಇಂಡಿಯನ್ಸ್ ಪರ ಜಸ್ಪ್ರೀತ್ ಬುಮ್ರಾ ಮೂರು ವಿಕೆಟ್ ಪಡೆದರೆ, ಟ್ರೆಂಟ್ ಬೌಲ್ಟ್, ಆಡಮ್ ಮಿಲ್ನೆ ಮತ್ತು ರಾಹುಲ್ ಚಾಹರ್ ತಲಾ ಒಂದು ವಿಕೆಟ್ ಪಡೆದರು.

Leave a Comment

Your email address will not be published. Required fields are marked *