ಕಡಬ| ಪೊಲೀಸ್ ಪೇದೆಯಿಂದ ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪಿ ಶಿವರಾಜ್ ನಾಯಕ್ ಬಂಧನ

ಕಡಬ: ವರ್ಷಗಳ ಹಿಂದೆ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ, ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಕಡಬ ಠಾಣಾ ಪೊಲೀಸ್ ಕಾನ್‌ಸ್ಟೆಬಲ್‌ ಶಿವರಾಜ್ ನಾಯಕ್ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

Ad Widget ... ..

ಸಂತ್ರಸ್ತೆಯ ತಂದೆ ಸೋಮವಾರ ಕಡಬ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ, ಕಡಬ ಠಾಣೆ ಪೊಲೀಸರು ಆರೋಪಿ ಶಿವರಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

Ad Widget

ಕಡಬ ಠಾಣೆಗೆ ಸೋಮವಾರ ಸಂಜೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಋಷಿಕೇಶ್ ಭಗವಾನ್ ಸೋನಾವಣೆ, ‘ಇದು ಗಂಭೀರ ಪ್ರಕರಣವಾಗಿದ್ದು, ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ಸಮಗ್ರ ತನಿಖೆ ಬಳಿಕ ವಿವರ ನೀಡಲಾಗುವುದು’ ಎಂದು ಪ್ರತಿಕ್ರಿಯಿಸಿದ್ದಾರೆ.

Leave a Comment

Your email address will not be published. Required fields are marked *