ಮೃತಪತ್ನಿಯ ನೆನಪಲ್ಲೇ ಆತ್ಮಹತ್ಯೆ ಮಾಡಿಕೊಂಡ ಸೈನಿಕ| ಅನಾಥವಾಯ್ತು ಮಗು

Ad Widget ... ..

ಕೋಲಾರ: ಸಿಆರ್​ಪಿಎಫ್ ಯೋಧನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೆಹಲಿ ಸೇನಾ ಆಸ್ಪತ್ರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯೋಧ ಕೋಲಾರ ಜಿಲ್ಲೆ ಕೆಜಿಎಫ್ ನಿವಾಸಿ ದಿಲೀಪ್(34) ಎಂದು ಗುರುತಿಸಲಾಗಿದೆ.

Ad Widget

ಈತ ದಿಲೀಪ್ ಜಮ್ಮು ಕಾಶ್ಮೀರದಲ್ಲಿ ಸೇನಾನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಉಳಿಸಿಕೊಳ್ಳಲು ದೆಹಲಿ ಸೇನಾ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಳೆದ ಕೆಲವು ವರ್ಷಗಳ ಹಿಂದೆಯಷ್ಟೆ ಈತನ ಪತ್ನಿ ಕೂಡ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದು, ಈಗ ದಿಲೀಪ್ ಕೂಡ ಹೆಂಡತಿಯ ಹಾದಿಯನ್ನೇ ಹಿಡಿದಿದ್ದಾರೆ. ತಂದೆ-ತಾಯಿಯ ಆತ್ಮಹತ್ಯೆಯಿಂದ ಒಬ್ಬ ಮಗು‌ ಮಾತ್ರ ಅನಾಥವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Leave a Comment

Your email address will not be published. Required fields are marked *