Ad Widget .

ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ| ಹಲವು ಮಹಿಳೆಯರ ಬಾಳಲ್ಲಿ ಆಟವಾಡಿದ್ದವನ ಶಿಕ್ಷೆ ಮಾರ್ಪಾಡು ಅರ್ಜಿ ತಿರಸ್ಕರಿಸಿದ ಹೈಕೋರ್ಟ್|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು: ವಿಕೃತಕಾಮಿ ಉಮೇಶ್ ರೆಡ್ಡಿಗೆ ಸೆಷನ್ಸ್​ ಕೋರ್ಟ್​ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸುವಂತೆ ಹೈಕೋರ್ಟ್​​​ಗೆ ಉಮೇಶ್ ರೆಡ್ಡಿ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು.

Ad Widget . Ad Widget . Ad Widget .

10 ವರ್ಷಗಳಿಂದ ಒಂಟಿಯಾಗಿಯೇ ಸೆರೆಯಲ್ಲಿಡಲಾಗಿದೆ. ಕ್ಷಮಾದಾನ ಅರ್ಜಿ ಇತ್ಯರ್ಥ ವಿಳಂಬಿಸಲಾಗಿದ್ದು, ಇದರಿಂದ ಮಾನಸಿಕ ಯಾತನೆ ಅನುಭವಿಸಿದ್ದೇನೆ ಎಂದು ಉಮೇಶ್ ರೆಡ್ಡಿ ವಕೀಲರ ಮೂಲಕ ವಾದ ಮಂಡಿಸಿದ್ದನು.

ಕ್ಷಮಾದಾನ ಅರ್ಜಿ ವಿಳಂಬ ವಾದ ತಳ್ಳಿ ಹಾಕಿದ ಕೋರ್ಟ್​

ಆದರೆ ಕೋರ್ಟ್ ಉಮೇಶ್ ರೆಡ್ಡಿಯ ವಾದವನ್ನು ತಳ್ಳಿಹಾಕಿದ್ದು ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ವಿಳಂಬ ಮಾಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ಆದೇಶ ಹೊರ ಬಿದ್ದಿದೆ. ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಗಲ್ಲು ಶಿಕ್ಷೆಯಿಂದ‌ ವಿನಾಯಿತಿ ಕೋರಿದ್ದ ಉಮೇಶ್ ರೆಡ್ಡಿ ಅರ್ಜಿಯನ್ನು ಹೈಕೋರ್ಟ್​​ ವಜಾ ಮಾಡಿದೆ. ನ್ಯಾ. ಅರವಿಂದ್ ಕುಮಾರ್, ನ್ಯಾ. ಪ್ರದೀಪ್ ಸಿಂಗ್ ಯೆರೂರ್ ರವರ ಪೀಠದಿಂದ ತೀರ್ಪು ಹೊರ ಬಿದ್ದಿದೆ. 1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದವು.

ಹಲವೆಡೆ ವಿಕೃತಿ ಮೆರೆದಿದ್ದ ಕಾಮುಕ

ಫೆಬ್ರವರಿ 28, 1998 ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007 ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಇದಲ್ಲದೇ ಹಲವು ಅತ್ಯಾಚಾರ ಕೊಲೆ ಪ್ರಕರಣಗಳಲ್ಲಿ ಉಮೇಶ್ ರೆಡ್ಡಿ ಆರೋಪಿಯಾಗಿದ್ದ. 6 ಬಾರಿ ಪೊಲೀಸರ ಬಂಧನದಿಂದ ತಪ್ಪಿಸಿಕೊಂಡಿದ್ದ. ಮೊದಲಿಗೆ ಪೊಲೀಸ್ ಕೆಲಸದಲ್ಲಿದ್ದು ಸೇವೆಯಿಂದ ವಜಾಗೊಂಡಿದ್ದ ಚಿತ್ರದುರ್ಗ ಮೂಲದ ಉಮೇಶ್ ರೆಡ್ಡಿ ಜೈಲಿನಲ್ಲಿ ಬೆತ್ತಲಾಗಿ ತಿರುಗುತ್ತಿದ್ದ ಎಂದು ಸಹ ವರದಿಯಾಗಿತ್ತು. ಹೈಕೋರ್ಟ್ ಅರ್ಜಿಯ ವಿರುದ್ಧ ಮೇಲ್ಮನವಿಯಲ್ಲಿ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆ ಎತ್ತಿ ಹಿಡಿದಿತ್ತು.

ರಾಷ್ಟ್ರಪತಿ ಕ್ಷಮಾದಾನ ತಿರಸ್ಕಾರ

ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಉಮೇಶ್ ರೆಡ್ಡಿ ತಾಯಿ ಸಲ್ಲಿಸಿದ್ದ ಅರ್ಜಿ 2013 ರಲ್ಲಿ ತಿರಸ್ಕರಿಸಲ್ಪಟ್ಟಿತ್ತು. ತದನಂತರ ಗಲ್ಲು ಶಿಕ್ಷೆ ಜೀವಾವಧಿಯಾಗಿ ಮಾರ್ಪಡಿಸಲು ಉಮೇಶ್ ರೆಡ್ಡಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ.

Leave a Comment

Your email address will not be published. Required fields are marked *