Ad Widget .

ಇದು ಹೃದಯಗಳ ವಿಷಯ| ನಿಮ್ಮ ಹೃದಯ ಜೋಪಾನ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹೃದಯದ ಲಬ್ ಡಬ್ ಲಬ್ ಡಬ್ ಬಡಿತವೇ ಜೀವಂತಿಕೆಯ ಸೆಲೆ. ಇದು ನಿರಂತರವಾಗಿದ್ದರೇನೆ ಜೀವನ. ಈ ಹೃದಯ ಎಲ್ಲಾ ಭಾವನೆಗಳಿಗೂ ಮೂಲ. ಆದ್ದರಿಂದಲೇ ಹೃದಯವಂತರು, ಹೃದಯಹೀನರು ಎಂಬ ಪದಗಳು ಹುಟ್ಟಿಕೊಂಡಿರೋದು. ಇನ್ನು ಹೃದಯಗಳ ಕೊಡು ಕೊಳ್ಳುವಿಕೆಯಂತು ಮತ್ತೊಂದು ಗಾಢ ಸಂಬಂಧ ಬೆಸೆಯಲು ಕಾರಣವಾಗಿವೆ. ಇಂಥ ಅಮೂಲ್ಯ ಹೃದಯವು ಸದಾ ಆರೋಗ್ಯವಾಗಿರಬೇಕು ಎಂದೇ ಎಲ್ಲರು ಬಯಸೋದು. ಇಂಥ ಹೃದಯಕ್ಕೂ ಒಂದು ದಿನವಿದೆ ಎಂದು ನಿಮಗೆ ಗೊತ್ತೇ?

Ad Widget . Ad Widget . Ad Widget .

ಹೃದಯದ ಆರೋಗ್ಯದ ಕಾಳಜಿಯ ಅರಿವನ್ನು ಜನಸಾಮಾನ್ಯರಿಗೆ ಮೂಡಿಸಲು ವಿಶ್ವಮಟ್ಟದಲ್ಲಿ ನಡೆಯುವ ವಿಶ್ವ ಹೃದಯ ದಿನವನ್ನು ಸೆಪ್ಟೆಂಬರ್ 29 ರಂದು ಆಚರಿಸಲಾಗುತ್ತಿದೆ. ವರ್ಲ್ಡ್ ಹಾರ್ಟ್ ಫೆಡರೇಶನ್ (ಡಬ್ಲ್ಯುಎಚ್‌ಎಫ್) ಅಂತಾರಾಷ್ಟ್ರೀಯ ಅಭಿಯಾನವಾಗಿ ಪ್ರತಿ ವರ್ಷ ಸೆ.29ರಂದು ವಿಶ್ವ ಹೃದಯ ದಿನವನ್ನು ಆಯೋಜಿಸುತ್ತದೆ.

ಹೃದಯದ ಕಾಳಜಿಯ ಕಾರ್ಯಕ್ರಮಗಳು ಹಲವಾರು ವರ್ಷಗಳಿಂದ ನಡೆಯುತ್ತಾ ಬಂದಿದ್ದರೂ 2000ನೇ ಇಸವಿಯಲ್ಲಿ ಮೊದಲ ಬಾರಿಗೆ ವಿಶ್ವಮಟ್ಟದ ಬೃಹತ್ ಅಭಿಯಾನದ ರೂಪದಲ್ಲಿ ವಿಶ್ವ ಆರೋಗ್ಯ ದಿನವನ್ನು ಪ್ರಾರಂಭಿಸಲಾಯಿತು. ಹೆಸರೇ ತಿಳಿಸುವಂತೆ ಸಮಾಜದಲ್ಲಿರುವ ಎಲ್ಲಾ ವರ್ಗಗಳ ಜನತೆಗೆ ಹೃದಯದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಮೂಡಿಸುವುದು ಹಾಗೂ ಹೃದಯಸ್ತಂಭನ, ಹೃದಯಾಘಾತ ಮೊದಲಾದವುಗಳ ಬಗ್ಗೆ ಸೂಕ್ತ ಮಾಹಿತಿ ಒದಗಿಸುವುದು ಹಾಗೂ ಇವುಗಳಿಂದ ರಕ್ಷಣೆ ಪಡೆಯಲು ಸೂಕ್ತ ಕ್ರಮ ಹಾಗೂ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಜನತೆಗೆ ಶಿಕ್ಷಣ ನೀಡುವುದೂ ಈ ದಿನಾಚರಣೆಯ ಉದ್ದೇಶವಾಗಿದೆ.

ವಿಶ್ವ ಹೃದಯ ದಿನಾಚರಣೆಯನ್ನು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಜೊತೆ ಒಗ್ಗೂಡಿ ವಿಶ್ವ ಹೃದಯ ಒಕ್ಕೂಟ (ಡಬ್ಲ್ಯುಎಚ್‌ಎಫ್) 1999ರಲ್ಲಿ ಆರಂಭಿಸಿತು. ಈ ದಿನದ ಮೂಲ ಕಲ್ಪನೆಯನ್ನು 1997-1999ರವರೆಗೆ ವರ್ಲ್ಡ್ ಹಾರ್ಟ್ ಫೆಡರೇಶನ್ (ಡಬ್ಲ್ಯುಎಚ್‌ಎಫ್) ಅಧ್ಯಕ್ಷ ಆಂಟೋನಿ ಬೇಯ್ಸ್ ಡಿ ಲೂನಾ ಹೊಂದಿದ್ದರು. ಮೊದಲು ವಿಶ್ವ ಹೃದಯ ದಿನವನ್ನು ಸೆಪ್ಟೆಂಬರ್ ಕೊನೆಯ ಭಾನುವಾರ (2011 ರವರೆಗೆ) ಆಚರಿಸಲಾಗುತ್ತಿತ್ತು. ಈ ಕ್ರಮ ಸುಮಾರು 2010ರ ವರೆಗೂ ಮುಂದುವರೆಯಿತು. 2011 ರಿಂದ ಈ ದಿನವನ್ನು ಕೊನೆಯ ಭಾನುವಾರದ ಕಟ್ಟುಪಾಡಿನಿಂದ ಮುಕ್ತಗೊಳಿಸಿ ಖಚಿತ ದಿನವಾಗಿ 29 ತಾರೀಖಿಗೆ ನಿಗದಿಗೊಳಿಸಲಾಯಿತು.

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅಂದಾಜಿನ ಪ್ರಕಾರ ಪ್ರತಿವರ್ಷ 17.9 ದಶಲಕ್ಷಕ್ಕೂ ಹೆಚ್ಚು ಜನರು ಹೃಯದ ಸಂಬಂಧಿ ಕಾಯಿಲೆಗಳಿಂದ ಸಾಯುತ್ತಿದ್ದಾರೆ. ಇದು ಜಾಗತಿಕ ಸಾವಿನಲ್ಲಿ ಶೇ.31ಕ್ಕಿಂತ ಹೆಚ್ಚು ಇದೆ. ಸುಮಾರು 80 ಪ್ರತಿಶತದಷ್ಟು ಜನರು ಹೃದಯಾಘಾತ ಅಥವಾ ಪಾರ್ಶ್ವವಾಯುವಿನಿಂದ ಸಾಯುತ್ತಿದ್ದಾರೆ. ಶೇ. 75ರಷ್ಟು ಪ್ರಕರಣಗಳು ಕಡಿಮೆ ಮತ್ತು ಮಧ್ಯಮ-ಆದಾಯದ ದೇಶಗಳಿಂದ ವರದಿಯಾಗಿವೆ.

ವಿಶ್ವ ಹೃದಯ ಒಕ್ಕೂಟದ ಪ್ರಕಾರ, ಅನಾರೋಗ್ಯಕರ ಆಹಾರ, ತಂಬಾಕು ಬಳಕೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಆಲ್ಕೋಹಾಲ್ ಬಳಕೆಯಂತಹ ನಾಲ್ಕು ಪ್ರಮುಖ ಅಪಾಯಕಾರಿ ಅಂಶಗಳನ್ನು ನಿಯಂತ್ರಿಸುವ ಮೂಲಕ ಕನಿಷ್ಠ 80% ಅಕಾಲಿಕ ಮರಣಗಳನ್ನು (ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ) ರಕ್ಷಿಸಬಹುದು. ವಿಶ್ವ ಹೃದಯ ದಿನದ ಅಭಿಯಾನದಲ್ಲಿ ಜನಸಾಮಾನ್ಯರೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೃದಯ ಸಂಬಂಧಿತ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವು ಪಡೆಯುತ್ತಾರೆ ಹಾಗೂ ಅಕಾಲಿಕವಾಗಿ ಸಂಭವಿರುವ ಸಾವು ಎದುರಾಗದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸುತ್ತಾರೆ.

ಕೆಲಸದ ಒತ್ತಡ ಸಾಮಾನ್ಯ. ಈ ಒತ್ತಡವನ್ನು ಕಡಿಮೆ ಮಾಡಿಕೊಳ್ಳದಿದ್ದರೆ ಹೃದಯಕ್ಕೆ ಪೆಟ್ಟು ಬೀಳುವುದು ಖಚಿತ. ಹೀಗಾಗಿ ಕೆಲಸ ಅಥವಾ ಇತರೆ ವಿಷಯಗಳಲ್ಲಿನ ಒತ್ತಡವನ್ನು ಆದಷ್ಟು ಕಡಿಮೆ ಮಾಡಿಕೊಳ್ಳಿ. ಕೋಪ, ಟೆನ್ಶನ್ ಬಿಟ್ಟು ಶಾಂತ ರೀತಿಯಲ್ಲಿ ಇರಿ. ಇದರಿಂದ ಹೃದಯದ ಆರೋಗ್ಯಕ್ಕೂ ಒಳ್ಳೆಯದು, ಮನಸ್ಸಿಗೂ ನೆಮ್ಮದಿ ಸಿಗುತ್ತದೆ.

ಇನ್ನು, ನಮ್ಮ ದೇಹವನ್ನು ಸದೃಢವಾಗಿಟ್ಟುಕೊಳ್ಳುವುದು ಸಹ ಮುಖ್ಯವಾಗುತ್ತದೆ. ಪ್ರತಿದಿನ ವ್ಯಾಯಾಮ, ಯೋಗಾಸನ ಮಾಡುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದಿನನಿತ್ಯ ಕನಿಷ್ಠ 45 ನಿಮಿಷ ದೇಹವನ್ನು ದಂಡಿಸಿ ಅಂದರೆ ವ್ಯಾಯಾಮ ಮಾಡಿ, ವಾಕ್ ಮಾಡಿ. ದಿನಕ್ಕೆ 10 ಸಾವಿರ ಹೆಜ್ಜೆ ಹಾಕಿರಿ. ಇದು ಆರೋಗ್ಯಕ್ಕೆ ಒಳ್ಳೆಯದು.
ಕಣ್ತುಂಬ ನಿದ್ರೆ ಮಾಡುವುದು ಮುಖ್ಯ. ನಿದ್ರೆಯ ಕೊರತೆಯಿಂದ ಹೃದಯ ಸಂಬಂಧಿ ಕಾಯಿಲೆಗಳು ಬರಬಹುದು. ಹೀಗಾಗಿ ಕನಿಷ್ಠ 7-8 ಗಂಟೆಗಳ ಕಾಲ ನಿದ್ದೆ ಮಾಡುವುದು ಆರೋಗ್ಯಕ್ಕೆ ಉತ್ತಮ.

Leave a Comment

Your email address will not be published. Required fields are marked *