ಉಪ್ಪಿನಂಗಡಿ: ನೀರೆಂದು ತಿಳಿದು ಪೆಟ್ರೋಲ್ ‌ಕುಡಿದ ಮಹಿಳೆ ಸಾವು

Ad Widget ... ..

ಉಪ್ಪಿನಂಗಡಿ: ಮಹಿಳೆಯೊಬ್ಬರು ತಪ್ಪಾಗಿ ನೀರಿನ ಬದಲು ಪೆಟ್ರೋಲ್‌ ಕುಡಿದು ಅಸ್ವಸ್ಥಗೊಂಡು ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆಯ ಸಂಪದಕೋಡಿ ಎಂಬಲ್ಲಿ ನಡೆದಿದೆ.

Ad Widget

ಮೃತ ಮಹಿಳೆ ಪದ್ಮಾವತಿ (79) ಎಂದು ಗುರುತಿಸಲಾಗಿದೆ. ದೃಷ್ಟಿ ದೋಷದಿಂದ ಬಳಲುತ್ತಿದ್ದ ಈಕೆ ಪೆರ್ನೆಯ ಸಂಪದಕೋಡಿಯಲ್ಲಿರುವ ತನ್ನ ಮಗಳ ಮನೆಗೆ ಬಂದಿದ್ದಾಗ ಅಲ್ಲಿ ಹುಲ್ಲು ಕತ್ತರಿಸುವ ಯಂತ್ರದ ಬಳಕೆಯ ಉದ್ದೇಶದಿಂದ ಮನೆಯಲ್ಲಿ ಬಾಟಲಿಯಲ್ಲಿ ತಂದಿರಿಸಿದ ಪೆಟ್ರೋಲನ್ನು ತಿಳಿಯದೇ ಕುಡಿದಿದ್ದಾರೆ ಎಂದು ಹೇಳಲಾಗಿದೆ.

ಆ ಬಳಿಕ ಅಸ್ವಸ್ಥರಾದ ಅವರನ್ನು ಮಂಗಳೂರಿನ ವೆನ್‌ ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಅವರು ಸೆ. 29 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Comment

Your email address will not be published. Required fields are marked *