Ad Widget .

Tika ಉತ್ಸವ ಬಳಿಕ ‘ತಿಥಿ ಭೋಜನ’| “ಎನ್ ಸ್ವಾಮೀ ಇದೂ?” ಎಂದು ಕಾಲೆಳೆಯುತ್ತಿದ್ದಾರೆ ನೆಟ್ಟಿಗರು

ನವದೆಹಲಿ: ಕೇಂದ್ರ ಸರ್ಕಾರವು ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಹೆಸರನ್ನು ಬದಲಿಸಿದೆ. ಯೋಜನೆಗೆ ‘ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌’ ಯೋಜನೆ ಅಥವಾ ‘ಪಿಎಂ ಪೋಷಣ್‌’ ಎಂದು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

Ad Widget . Ad Widget .

ಮೋದಿ ನೇತೃತ್ವದ ಬಿಜೆಪಿ ಪಕ್ಷವು ಕೇಂದ್ರದಲ್ಲಿ ಅಧಿಕಾರ ಹಿಡಿದ ನಂತರ, ಈ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವಾರು ಯೋಜನೆಗಳ ಹೆಸರುಗಳನ್ನು ಬದಲಿಸಿದೆ. ಇದೀಗ, ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಈ ಪಟ್ಟಿಗೆ ಹೊಸದಾಗಿ ಸೇರಿಕೊಂಡಂತಾಗಿದೆ.

Ad Widget . Ad Widget .

ಯೋಜನೆಯ ಅಡಿಯಲ್ಲಿ ‘ತಿಥಿ ಭೋಜನ’ ಎಂದು ಕರೆಯಲಾಗುವ ಕಾರ್ಯಕ್ರಮವೂ ಸೇರಿದ್ದು, ಈ ಬಗ್ಗೆ ನೆಟ್ಟಿಗರು ಒಕ್ಕೂಟ ಸರ್ಕಾರವನ್ನು ಮತ್ತು ಬಿಜೆಪಿ ಪ್ರತಿನಿಧಿಗಳನ್ನು ಟ್ರೋಲ್ ಮಾಡುತ್ತಿದ್ದಾರೆ.

ಪಿಎಂ ಪೋಷಣ್ ಅಡಿಯಲ್ಲಿ, ವ್ಯಕ್ತಿಗಳು ಅಥವಾ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಹಬ್ಬದೂಟವನ್ನು ನೀಡುವ ಕಾರ್ಯಕ್ರಮವಾಗಿದೆ ‘ತಿಥಿ ಭೋಜನ್’. ಇದರಲ್ಲಿ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವ, ಹಬ್ಬಗಳಂದು ಯಾವುದೇ ವ್ಯಕ್ತಿಗಳು ಮತ್ತು ಸಂಸ್ಥೆಗಳು ಮಕ್ಕಳಿಗೆ ಸಿಹಿತಿಂಡಿ, ಹಣ್ಣುಗಳು ಇತ್ಯಾದಿಗಳನ್ನು ವಿತರಿಸುವುದಾಗಿದೆ.

ಕನ್ನಡದಲ್ಲಿ ‘ತಿಥಿ ಭೋಜನ’ ಎಂದರೆ, ಸಾವು ನಡೆದ ಮನೆಯಲ್ಲಿ ಕೆಲವು ದಿನಗಳು ಕಳೆದು, ಧಾರ್ಮಿಕ ಆಚರಣೆಯೊಂದಿಗೆ ಬಂಧು-ಮಿತ್ರಾದಿಗಳನ್ನು ಕರೆದು ಊಟ ಹಾಕಿಸುವುದಾಗಿದೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಜನರು ಒಕ್ಕೂಟ ಸರ್ಕಾರವನ್ನು ಮತ್ತು ಬಿಜೆಪಿ ಪ್ರತಿನಿಧಿಗಳನ್ನು ವ್ಯಂಗ್ಯ ಮಾಡುತ್ತಿದ್ದಾರೆ.

Leave a Comment

Your email address will not be published. Required fields are marked *