ಇಂದು ಸಿಇಟಿ ಫಲಿತಾಂಶ ಪ್ರಕಟ
ಬೆಂಗಳೂರು: ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ -ಸಿಇಟಿ ಬರೆದ ವಿದ್ಯಾರ್ಥಿಗಳ ಫಲಿತಾಂಶ ಇಂದು(ಸೆ.20) ಪ್ರಕಟವಾಗಲಿದೆ. 2021 ನೇ ಸಾಲಿನ ಸಿಇಟಿ ಆಗಸ್ಟ್ 28 ರಿಂದ 30ರವರೆಗೆ ನಡೆದಿತ್ತು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ 20 ದಿನಗಳಲ್ಲೇ ಸಿಇಟಿ ಫಲಿತಾಂಶ ಪ್ರಕಟಿಸಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರಾಧಿಕಾರದ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ ಸಂಜೆ 4 ಗಂಟೆಗೆ https://cetonline.karnataka.gov.in/kea ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಇಂದು ಸಿಇಟಿ ಫಲಿತಾಂಶ ಪ್ರಕಟ Read More »