September 2021

ಸೆ.17ರಿಂದ 8-10, ಹಾಗೂ ಸೆ.20ರಿಂದ 6 ಮತ್ತು 7ನೇ ತರಗತಿಗಳ ಪ್ರಾರಂಭಕ್ಕೆ ದ.ಕ ಜಿಲ್ಲಾಧಿಕಾರಿ ‌ಸೂಚನೆ

ಮಂಗಳೂರು, ಸೆ.13: ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು. ಮಕ್ಕಳಿಗೆ ತೊಂದರೆಯಾಗ ದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಾಲೆಗಳನ್ನು ತೆರೆಯುವ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೆ.17ರಂದು 8,9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ, ಸೆ.20ರಂದು 6 ಮತ್ತು 7ನೇ ತರಗತಿಗಳನ್ನು ಆರಂಭಿಸಲು ಸೂಚಿಸಿದರು. ಜೊತೆಗೆ ಎಲ್ಲ ಪ್ರಥಮ ಪಿ.ಯು.ಸಿ ತರಗತಿಗಳನ್ನು ಆರಂಭಿಸಲು ತಿಳಿಸಿದರು. […]

ಸೆ.17ರಿಂದ 8-10, ಹಾಗೂ ಸೆ.20ರಿಂದ 6 ಮತ್ತು 7ನೇ ತರಗತಿಗಳ ಪ್ರಾರಂಭಕ್ಕೆ ದ.ಕ ಜಿಲ್ಲಾಧಿಕಾರಿ ‌ಸೂಚನೆ Read More »

ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವಾ ಸಿಎ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಶ್ರೇಣಿ

ಮಂಗಳೂರು: ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದೆ. ಇದರಲ್ಲಿ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ದೇಶಕ್ಕೆ ಪ್ರಥಮ ಶ್ರೇಣಿ ಪಡೆದಿದ್ದಾರೆ. ರುತ್ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರಾಂಕ್ ಪಡೆದ ಪ್ರಥಮ ಮಂಗಳೂರಿಗರಾಗಿದ್ದಾರೆ, ಈಕೆ ಮಂಗಳೂರಿನ ರೋಸಿ ಮಾರಿಯಾ ಡಿಸಿಲ್ಲಾ ಮತ್ತು ರಫರ್ಟ್ ಡಿಸಿಲ್ಲಾ ದಂಪತಿಯ ಪುತ್ರಿ. ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಶ್ರೇಣಿ ಪಡೆದ ರುತ್ ಇತಿಹಾಸ ಸೃಷ್ಟಿಸಿದ್ದು, ಕಳೆದ ಕೆಲ ವರ್ಷಗಳಿಂದ ಪರೀಕ್ಷೆಯನ್ನು

ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವಾ ಸಿಎ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಶ್ರೇಣಿ Read More »

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಆಭರಣ ಎಗರಿಸಿದ ಮಹಿಳೆಯರು| ಮೂವರ ಬಂಧನ

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣವನ್ನು ಎಗರಿಸಿದ ಘಟನೆ ಸೆ.1 ರಂದು ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಮಹಿಳಾ ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ದಾವಣಗೆರೆ ಜಿಲ್ಲೆ ನಿವಾಸಿಗಳಾದ ಬೀಬಿಜಾನ್ , ಹುಸೇನ್ ಬಿ , ಜೈತುಂಬಿ ಎಂದು ಗುರುತಿಸಲಾಗಿದೆ. ಪುತ್ತೂರಿನ ಹಿಂದೂಸ್ತಾನ್ ಕಾಂಪ್ಲೆಕ್ಸ್ ನಲ್ಲಿರುವ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆಗೆ ಸೆ.1 ರಂದು ಬುರ್ಖಾ ಧರಿಸಿದ 3 ಜನ ಅಪರಿಚಿತ ಮಹಿಳೆಯರು ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಆಭರಣ ಎಗರಿಸಿದ ಮಹಿಳೆಯರು| ಮೂವರ ಬಂಧನ Read More »

ಮಾಧ್ಯಮಗಳ ವರದಿ‌ ಸುಳ್ಳು| ಎಲ್ಲಾ ‌ಮಾದರಿ ಕ್ರಿಕೆಟ್ ಗೂ‌ ಕೊಹ್ಲಿಯೇ ನಾಯಕ| ಸ್ಪಷ್ಟನೆ ನೀಡಿದ ಬಿಸಿಸಿಐ

ನವದೆಹಲಿ: ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿಯೂ ವಿರಾಟ್ ಕೊಹ್ಲಿಯವರೇ ಟೀಂ ಇಂಡಿಯಾ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸ್ಪಷ್ಟಪಡಿಸಿದೆ. ಐಸಿಸಿ ಟಿ20 ವಿಶ್ವಕಪ್ ಬಳಿಕ ಕೊಹ್ಲಿಯವರು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕತ್ವ ತೊರೆಯಲಿದ್ದಾರೆ.ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಲ್ ಹೇಳಿದ್ದಾರೆ. ಮಾಧ್ಯಮ ವರದಿ ನಿಜವಲ್ಲ. ಸೀಮಿತ

ಮಾಧ್ಯಮಗಳ ವರದಿ‌ ಸುಳ್ಳು| ಎಲ್ಲಾ ‌ಮಾದರಿ ಕ್ರಿಕೆಟ್ ಗೂ‌ ಕೊಹ್ಲಿಯೇ ನಾಯಕ| ಸ್ಪಷ್ಟನೆ ನೀಡಿದ ಬಿಸಿಸಿಐ Read More »

ಮಗುವಿನೊಂದಿಗೆ ಬಾವಿಗೆ ಜಿಗಿದು‌ ತಾಯಿ ಆತ್ಮಹತ್ಯೆ

ಬಾಗಲಕೋಟೆ: ತನ್ನ ಒಂದು ವರ್ಷದ ಮಗುವನ್ನು ಹಿಡಿದುಕೊಂಡು ತಾಯಿಯೋರ್ವಳು ಬಾವಿಗೆ ಹಾರಿದ ದುರ್ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ರಾಘಾಪುರದಲ್ಲಿ ನಡೆದಿದೆ. ಘಟನೆಯಲ್ಲಿ ಮಗು ಶಿವಾನಿ ಸಾವನ್ನಪ್ಪಿದ್ದು, ಮಗುವಿನ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ತಾಯಿಗಾಗಿ ಬಾವಿಯಲ್ಲಿ ಹುಡುಕಾಟ ಮುಂದುವರೆದಿದೆ. ಗುಳೇದಗುಡ್ಡ ತಾಲೂಕಿನ ಹಂಸನೂರ ಗ್ರಾಮದ ಫಕೀರವ್ವ(26) ಎಂಬ ತಾಯಿಯೇ ತನ್ನ ಮಗುವಿನೊಂದಿಗೆ ಬಾವಿಗೆ ಜಿಗಿದ ಮಹಿಳೆ. ಈಕೆ ಹೆರಿಗೆಗಾಗಿ ತನ್ನ ಅಜ್ಜಿಮನೆ ರಾಘಾಪುರಕ್ಕೆ ಬಂದಿದ್ದಳು. ಹೆರಿಗೆ ಬಳಿಕ ಇಂದು ಗಂಡನ ಮನೆಯವರು ಕರೆದುಕೊಂಡು ಈಕೆಯನ್ನು ಮರಳಿ ಕರೆದೊಯ್ಯಲು

ಮಗುವಿನೊಂದಿಗೆ ಬಾವಿಗೆ ಜಿಗಿದು‌ ತಾಯಿ ಆತ್ಮಹತ್ಯೆ Read More »

ವೇಣೂರು: ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ನಿಧನ

ಮೂಡುಬಿದಿರೆ: ವೇಣೂರು‌ ಸಮೀಪದ ಮರೋಡಿ ಗ್ರಾಮದ ಪಲಾರ ನಿವಾಸಿ, ಬಿಜೆಪಿ ಮುಖಂಡ ರಾಮ ಪ್ರಸಾದ್‌‌ ಮರೋಡಿ (37) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ,13ರ ಸೋಮವಾರದಂದು ನಿಧನರಾಗಿದ್ದಾರೆ. ರಾಮ ಪ್ರಸಾದ್‌ ಅವರು ಕೆಲ ದಿನಗಳ ಹಿಂದೆ ಜಾಂಡಿಸ್‌ ಖಾಯಿಲೆಯಿಂದ ಬಳಲುತ್ತಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರಾಮ್‌ ಪ್ರಸಾದ್‌ ಅವರು ಬಜರಂಗದಳದ ಮೇಣೂರು ಪ್ರಖಂಡ ಸಂಚಾಲಕರಾಗಿದ್ದರು. ಇವರು ಪಲಾರಗೋಳಿ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಸಮಿತಿಯ

ವೇಣೂರು: ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ನಿಧನ Read More »

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್(80) ಅವರು ಇಹಲೋಕ ತ್ಯಜಿಸಿದ್ದಾರೆ. ಯೋಗ ಮಾಡುವ ವೇಳೆ ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಬಳಿಕ ಮಂಗಳೂರಿನ ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್ ನಾಯಕರಾದ ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಆಸ್ಪತ್ರೆಗೆ

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ Read More »

ನಮ್ಮಿಬ್ಬರದ್ದು ಲವ್ ಅ್ಯಂಡ್ ಹೇಟ್ ಸಂಬಂಧ- ವಿಧಾನಸಭೆಯಲ್ಲಿ ಈಶ್ವರಪ್ಪ ಕುರಿತು ಸಿದ್ದು‌ ಹಾಸ್ಯ

ಬೆಂಗಳೂರು : ವಿಧಾನಮಂಡಲ ಅಧಿವೇಶನ ಇಂದು ಆರಂಭವಾಗಿದ್ದು, ಕಲಾಪದಲ್ಲಿ ಇಂದು ಸ್ವಾರಸ್ಯಕರ ಘಟನೆ ನಡೆಯಿತು. ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಈಶ್ವರಪ್ಪ ಅವರ ಕುರಿತು ಈಶ್ವರಪ್ಪ ಮತ್ತು ನಂದು ಲವ್ ಅಂಡ್ ಹೇಟ್ ಸಂಬಂಧ ಎಂದು ಹೇಳಿದ್ದು, ಕಲಾಪದಲ್ಲಿ ಸ್ವಾರಸ್ಯ ಸೃಷ್ಟಿಸಿತು. ವಿಧಾನಸಭೆ ಕಲಾಪದ ವೇಳೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತನಾಡುತ್ತಿದ್ದರು, ಈ ವೇಳೆ ಅವರು ಮಾತನಾಡಿದ್ದು ಸರಿಯಾಗಿ ಕೇಳಿಸುತ್ತಿರಲಿಲ್ಲ. ಆಗ ಸ್ಪೀಕರ್ ಕಾಗೇರಿ ಮೈಕ್ ಸರಿ ಮಾಡಿಕೊಳ್ಳುವಂತೆ ಸೂಚಿಸಿದರಲ್ಲದೇ, ನೀವು ಮಾತನಾಡುತ್ತಿರುವುದು

ನಮ್ಮಿಬ್ಬರದ್ದು ಲವ್ ಅ್ಯಂಡ್ ಹೇಟ್ ಸಂಬಂಧ- ವಿಧಾನಸಭೆಯಲ್ಲಿ ಈಶ್ವರಪ್ಪ ಕುರಿತು ಸಿದ್ದು‌ ಹಾಸ್ಯ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸಿಎಂ ಗೆ ಬೆಲೆಏರಿಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಜ್ಜು

ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾಗಿದೆ. 6 ತಿಂಗಳ ಬಳಿಕ ಅಧಿವೇಶನ ನಡೆ ಯುತ್ತಿದ್ದು, ಕೊರೊನಾದಿಂದಾಗಿ ಸಾಕಷ್ಟು ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.ಅಧಿವೇಶನದಲ್ಲಿ ಕೊಳಚೆ ಪ್ರದೇಶಗಳ ಭೂಕಬಳಿಕೆ ವಿರುದ್ಧ ಕ್ರಮಕ್ಕೆ ತಿದ್ದುಪಡಿ ಮಸೂದೆ, ಬಿಡಬ್ಲ್ಯುಎಸ್‌ಎಸ್‌ಬಿ ತಿದ್ದುಪಡಿ, ಪೌರಸಭೆ, ಶಿಕ್ಷಕರ ವರ್ಗಾವಣೆ ನಿಯಮ ಮಸೂದೆ ಮತ್ತು 4 ಅಧ್ಯಾದೇಶ ಸಹಿತ 18 ಮಸೂದೆಗಳ ಮಂಡನೆಗೆ ಸರಕಾರ ಸಿದ್ಧವಾಗಿದೆ. ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆ

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸಿಎಂ ಗೆ ಬೆಲೆಏರಿಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಜ್ಜು Read More »

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ, ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ

ಯಾದಗಿರಿ: ಗುಂಪೊಂದು ಮಹಿಳೆಯನ್ನು ನಗ್ನಗೊಳಿಸಿ ಕಬ್ಬಿನ ಜಲ್ಲೆಯಿಂದ ಥಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ ಎಸಗಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಪಾಪಿಗಳು ಮಹಿಳೆ ಜೊತೆ ವಿಕೃತ ವರ್ತನೆ ನಡೆಸಿದ್ದಾರೆ. ಈ ಘಟನೆ ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿ ಮಧ್ಯೆ ನಡೆದಿದೆ ಎನ್ನಲಾಗುತ್ತಿದೆ. 5-6 ಜನರ ಗುಂಪಿನಿಂದ ಮಹಿಳೆಯ ಮೇಲೆ ದೌರ್ಜನ್ಯ ನಡೆದಿದ್ದು, ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ. ಹಲ್ಲೆಗೊಳಗಾದ ಮಹಿಳೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವೈರಲ್ ಆದ

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ, ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ Read More »