September 2021

ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ

ಗುಜರಾತ್: ಕ್ಷಿಪ್ರ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರನ್ನ ಭೇಟಿಯಾಗಿ ವಿಜಯ್ ರೂಪಾನಿ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ ಎನ್ನಲಾಗಿದೆ. ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಾಂಧಿನಗರಕ್ಕೆ ಬಂದಿದ್ದು ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಇದೆ. ಇನ್ನು ರಾಜೀನಾಮೆ ನಂತರ ಹೇಳಿಕೆ ನೀಡಿರುವ ವಿಜಯ್ ರೂಪಾನಿ, ನಮ್ಮ ಪಕ್ಷದಲ್ಲಿ ಕಾಲಕ್ಕೆ […]

ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ Read More »

ಶೀಘ್ರದಲ್ಲೇ 1ರಿಂದ 5ನೇ ತರಗತಿ ಪ್ರಾರಂಭ – ಸಚಿವ ಬಿ.ಸಿ ನಾಗೇಶ್

ಶಿವಮೊಗ್ಗ: 1ರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸುವ ಕುರಿತು ಶೀಘ್ರವೇ ತಾಂತ್ರಿಕ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 6 ರಿಂದ 8ನೇ ತರಗತಿಗಳನ್ನು ನಮ್ಮ ಶಿಕ್ಷಕರು ಚೆನ್ನಾಗಿ ನಡೆಸಿದ್ದಾರೆ. ಶಿಕ್ಷಕರ ಕಾರ್ಯವೈಖರಿ ನೋಡಿ ತುಂಬ ಸಂತೋಷವಾಗಿದೆ. ಸದ್ಯದಲ್ಲೇ 1ರಿಂದ 5 ರವರೆಗೆ ಶಾಲೆ ತೆರೆಯುವ ಬಗ್ಗೆ ತಾಂತ್ರಿಕ ಸಮಿತಿ ಮುಂದೆ ಚರ್ಚೆ ಮಾಡುತ್ತೇವೆ. ತಾಂತ್ರಿಕ ಸಮಿತಿ ಸಭೆ ಅನುಮತಿ

ಶೀಘ್ರದಲ್ಲೇ 1ರಿಂದ 5ನೇ ತರಗತಿ ಪ್ರಾರಂಭ – ಸಚಿವ ಬಿ.ಸಿ ನಾಗೇಶ್ Read More »

ಮುಂಬೈ: 33 ಗಂಟೆಗಳ ಕಾಲ ಜೀವನ್ಮರಣ ಹೋರಾಟದಲ್ಲಿ ಬದುಕುಳಿಯದ ಅತ್ಯಾಚಾರ ಸಂತ್ರಸ್ತೆ

ಮುಂಬೈ: ಇಲ್ಲಿನ ಸಾಕಿನಾಕಾ ಪ್ರದೇಶದಲ್ಲಿ ಟೆಂಪೋದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ 33 ಗಂಟೆಗಳ ಕಾಲ ಜೀವನ್ಮರಣದ ನಡುವೆ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಾಕಿನಾಕಾ ಪ್ರದೇಶದಲ್ಲಿ ನಿಂತಿದ್ದ ಟೆಂಪೋದಲ್ಲಿ ಮಹಿಳೆಯನ್ನು ಎಳೆದೊಯ್ದು ಕಾಮುಕ ಅತ್ಯಾಚಾರ ನಡೆಸಿದ್ದಲ್ಲದೇ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ಚಿತ್ರಹಿಂಸೆ ನೀಡಿದ್ದ. ಅತ್ಯಾಚಾರ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಐಪಿಸಿ ಸೆಕ್ಷಣ್ 307, 376, 504ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು 45 ವರ್ಷದ ಆರೋಪಿ ಮೋಹನ್ ಚೌವ್ಹಾಣ್ ನನ್ನು

ಮುಂಬೈ: 33 ಗಂಟೆಗಳ ಕಾಲ ಜೀವನ್ಮರಣ ಹೋರಾಟದಲ್ಲಿ ಬದುಕುಳಿಯದ ಅತ್ಯಾಚಾರ ಸಂತ್ರಸ್ತೆ Read More »

ನೆಲ್ಯಾಡಿ: ಉದನೆಯ ಗಣಪತಿಕಟ್ಟೆಗೆ ಹಾನಿಗೊಳಿಸಿದ ಕಿಡಿಗೇಡಿಗಳು| ಸ್ಥಳಕ್ಕೆ ಹಿಂದೂ ಮುಖಂಡರು ದೌಡು|

ನೆಲ್ಯಾಡಿ: ಇಲ್ಲಿಗೆ ಸಮೀಪದ ಉದನೆಯ ಗಣಪತಿ ಕಟ್ಟೆಯನ್ನು ಕಿಡಿಗೇಡಿಗಳು ಹಾನಿಗೊಳಿಸಿರುವ ಘಟನೆ ಸೆ.10 ರ ರಾತ್ರಿ ನಡೆದಿದೆ. ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸೆ.10ರಂದು ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗಣಪತಿ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿತ್ತು. ಆದರೆ ರಾತ್ರಿ ವೇಳೆ ಕಿಡಿಗೇಡಿಗಳು ಬಾಳೆಗಿಡಗಳನ್ನು ಹಾಳುಮಾಡಿ ಮೆಟ್ಟಿಲನ್ನು ಹಾನಿಗೊಳಿಸಿದ್ದಾರೆ. ಕಲ್ಲು ಎತ್ತಿಹಾಕಿ ಮೆಟ್ಟಿಲು ಹಾಗೂ ಮೆಟ್ಟಿಲಿನ ಬದಿಗಳನ್ನು ಹಾನಿಗೊಳಿಸಿರುವುದಾಗಿ ವರದಿಯಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ನೆಲ್ಯಾಡಿ: ಉದನೆಯ ಗಣಪತಿಕಟ್ಟೆಗೆ ಹಾನಿಗೊಳಿಸಿದ ಕಿಡಿಗೇಡಿಗಳು| ಸ್ಥಳಕ್ಕೆ ಹಿಂದೂ ಮುಖಂಡರು ದೌಡು| Read More »

ಗಣಪತಿ ಮೂರ್ತಿ ಧ್ವಂಸ ಮಾಡಿದ ಕಿಡಿಗೇಡಿಗಳು ಗ್ರಾಮಸ್ಥರಿಂದ ಹೆಚ್ಚಿದ ಆಕ್ರೋಶ

ಚಿತ್ರದುರ್ಗ: ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ಮೂರ್ತಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕರು ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಿದ್ದರು. ಆದರೆ ತಡರಾತ್ರಿ ಗಣಪತಿ ಮೂರ್ತಿಯನ್ನ ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಈ ಕೃತ್ಯದಿಂದಾಗಿ ಹಿರೇಹಳ್ಳಿ ಗ್ರಾಮಸ್ಥರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸತತ 14 ವರ್ಷಗಳಿಂದ ಗ್ರಾಮದ ಯುವಕರು ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿಕೊಂಡು ಶಾಂತಿಯುತವಾಗಿ ಹಬ್ಬವನ್ನು ಆಚರಿಸಿಕೊಂಡು ಬಂದಿದ್ದರು. ಆದರೆ ಈ ರೀತಿ ಮಾಡಿರುವುದು

ಗಣಪತಿ ಮೂರ್ತಿ ಧ್ವಂಸ ಮಾಡಿದ ಕಿಡಿಗೇಡಿಗಳು ಗ್ರಾಮಸ್ಥರಿಂದ ಹೆಚ್ಚಿದ ಆಕ್ರೋಶ Read More »

ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ: ಸ್ಥಿತಿ ಗಂಭೀರ

ಹೈದರಾಬಾದ್‌: ಇಲ್ಲಿನ ಕೇಬಲ್‌ ಸೇತುವೆಯ ಮೇಲೆ ನಡೆದ ಅಪಘಾತದಲ್ಲಿ ತೆಲುಗು ಚಿತ್ರನಟ ಸಾಯಿ ಧರ್ಮ ತೇಜ್ ಅವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹೈದರಾಬಾದ್‌ನ ಕೇಬಲ್‌ ಸೇತುವೆಯ ಮೇಲೆ ಸಾಯಿ ಧರ್ಮ ತೇಜ್‌ ವೇಗವಾಗಿ ಚಲಿಸುತ್ತಿದ್ದ ಬೈಕ್‌ ಸ್ಕಿಡ್‌ ಆಗಿದ್ದರಿಂದ ಈ ಅಪಘಾತ ಸಂಭವಿಸಿದೆ. ಸಾಯಿ ಧರ್ಮ ತೇಜ್‌ ಅವರು ಹೆಲ್ಮೆಟ್‌ ಧರಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಪಘಾತ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ. ಜುಬಿಲಿ ಹಿಲ್ಸ್‌ನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಯಿ ಧರ್ಮ

ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ: ಸ್ಥಿತಿ ಗಂಭೀರ Read More »

ಪಣಂಬೂರು: ದೋಣಿ ದುರಂತ – ನಾಲ್ವರು ಮೀನುಗಾರರ ರಕ್ಷಣೆ , ಓರ್ವ ನಾಪತ್ತೆ

ಮಂಗಳೂರು: ಪಣಂಬೂರು ಸಮುದ್ರ ತೀರದಲ್ಲಿ ದೋಣಿ ದುರಂತ ಸಂಭವಿಸಿ ಮೀನುಗಾರರು ನೀರುಪಾಲಾದ ಘಟನೆ ನಡೆದಿದೆ. ಅಝರ್ ಎಂಬವರ ಮಾಲಕತ್ವದ ಗಿಲ್ ನೆಟ್ ಬೋಟ್ ಇದಾಗಿದ್ದು ಅವಘಡ ಸಂಭವಿಸಿ ಮೀನುಗಾರರು ನೀರುಪಾಲಾಗಿದ್ದು ಈ ಪೈಕಿ ಅಬ್ದುಲ್ ಅಜೀಜ್, ಇಂತಿಯಾಜ್, ಸಿನಾನ್, ಫೈರೋಜ್ ಎಂಬ ನಾಲ್ವರು ಮೀನುಗಾರರನ್ನು ದಡದಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ಪೈಕಿ ಓರ್ವ ನಾಪತ್ತೆಯಾಗಿದ್ದು ಆತನನ್ನು ಶರೀಫ್ ಎಂದು ಗುರುತಿಸಲಾಗಿದೆ. ಸದ್ಯ ದೋಣಿಯನ್ನು ದಡಕ್ಕೆ ತರಲಾಗಿದೆ.

ಪಣಂಬೂರು: ದೋಣಿ ದುರಂತ – ನಾಲ್ವರು ಮೀನುಗಾರರ ರಕ್ಷಣೆ , ಓರ್ವ ನಾಪತ್ತೆ Read More »

ರಾಜ್ಯದಲ್ಲಿ ಡೆಲ್ಟಾ ರೂಪಾಂತರಿ ಪತ್ತೆ| ಶುರುವಾಯ್ತು ಮತ್ತೊಂದು ಆತಂಕ

ಬೆಂಗಳೂರು : ಕೊರೊನಾ 3ನೇ ಅಲೆ ಭೀತಿ ಬೆನ್ನಲ್ಲೇ ಜನರಿಗೆ ಮತ್ತೊಂದು ಆತಂಕ ಶುರುವಾಗಿದ್ದು, ರಾಜ್ಯದಲ್ಲಿ ಕೊರೊನಾದ ಡೆಲ್ಟಾ ಉಪ ರೂಪಾಂತರಿ ಎವೈ3, ಎವೈ4, ಎವೈ6 (AY3, AY4, AY6) ಪತ್ತೆಯಾಗಿವೆ. ರಾಜ್ಯದಲ್ಲಿ ಈವರೆಗೆ ಹೊಸ ರೂಪಾಂತರಿಯ 400 ಸ್ಯಾಂಪಲ್‌ ಟೆಸ್ಟ್‌ ಮಾಡಲಾಗಿದ್ದು, ಇದರಲ್ಲಿ ಒಂದಿಷ್ಟು ಜನರಿಗೆ ರೂಪಾಂತರಿ ಕಂಡು ಬಂದಿದೆ.ಎವೈ3, ಎವೈ4, ಎವೈ6 ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪೈಕಿ ಕೆಲವರು ಡಿಸ್ಚಾರ್ಜ್‌ ಆಗಿದ್ದಾರೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಿ.ರಂದೀಪ್‌ ಹೇಳಿದ್ದಾರೆ.

ರಾಜ್ಯದಲ್ಲಿ ಡೆಲ್ಟಾ ರೂಪಾಂತರಿ ಪತ್ತೆ| ಶುರುವಾಯ್ತು ಮತ್ತೊಂದು ಆತಂಕ Read More »

ನಿನ್ನ ವಾಹನದಿಂದ ಬೆಳೆ ಉಳಿಸು – ಗಣಪತಿಗೆ ಜೀವಂತ ಇಲಿ ನೀಡಿ ಬೇಡಿಕೊಂಡ ರೈತ

ಚಿಕ್ಕಮಗಳೂರು: ಗಣಪತಿ ಹಬ್ಬದಂದು ರೈತನೊಬ್ಬ ಜೀವಂತ ಇಲಿಯನ್ನು ಗಣೇಶನಿಗೆ ನೀಡಿ, ಬೆಳೆಗಳನ್ನು ಉಳಿಸು ಎಂದು ಬೇಡಿಕೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದಲ್ಲಿ ನಡೆದಿದೆ. ಮರ್ಕಲ್ ಗ್ರಾಮದ ರೈತ ನಿತಿನ್ ಅವರ ಹೊಲದಲ್ಲಿ ಇಲಿಗಳ ಕಾಟ ಯಥೇಚ್ಛವಾಗಿತ್ತು. ಯಾವುದೇ ಔಷಧಿ ಇಟ್ಟರೂ, ಏನೇ ಮಾಡಿದರೂ ಇಲಿಗಳ ಹಾವಳಿ ನಿಯಂತ್ರಣಕ್ಕೆ ಬರುತ್ತಿರಲಿಲ್ಲ. ಕಷ್ಟಪಟ್ಟು ಬೆಳೆದ ಬೆಳೆಯೂ ಇಲಿ ಹಾಗೂ ಮಣ್ಣು ಪಾಲಾಗುತ್ತಿತ್ತು. ಇದರಿಂದ ಮನನೊಂದ ರೈತ ನಿನ್ನ ವಾಹನದಿಂದ ನಮ್ಮ ಬೆಳೆಗಳು ನಾಶವಾಗುತ್ತವೆ, ಬೆಳೆಗಳನ್ನ ಉಳಿಸಿಕೊಳ್ಳುವುದೇ ಕಷ್ಟವಾಗಿದೆ

ನಿನ್ನ ವಾಹನದಿಂದ ಬೆಳೆ ಉಳಿಸು – ಗಣಪತಿಗೆ ಜೀವಂತ ಇಲಿ ನೀಡಿ ಬೇಡಿಕೊಂಡ ರೈತ Read More »

ಮುಂಬೈ| ಮತ್ತೊಂದು ನಿರ್ಭಯಾ ಮಾದರಿ ಪ್ರಕರಣ| ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ರಾಡ್ ತುರುಕಿದ ಪಾಪಿ

ಮುಂಬೈ: ನಿರ್ಭಯಾ ಪ್ರಕರಣದಿಂದ ಇಡೀ ದೇಶವೆ ಬೆಚ್ಚಿ ಬಿದ್ದಿತ್ತು. 2012ರಲ್ಲಿ ನಡೆದ ಈ ಅತ್ಯಾಚಾರ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರತ ತಲೆ ತಗ್ಗಿಸುವಂತಾಗಿತ್ತು. ಇದೀಗ ಇದೇ ರೀತಿಯ ಮತ್ತೊಂದು ಪ್ರಕರಣ ಮುಂಬೈನಲ್ಲಿ ವರದಿಯಾಗಿದೆ. 34ರ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿದ ಘಟನೆ ಬೆಳಕಿಗೆ ಬಂದಿದೆ. ದೆಹಲಿಯ ನಿರ್ಭಯಾ ಮೇಲೆ ಬಸ್‌ನಲ್ಲಿ ಅತ್ಯಾಚಾರ ಮಾಡಿ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಲಾಗಿತ್ತು. ಇದೀಗ ಮುಂಬೈ ಅತ್ಯಾಚಾರ ಪ್ರಕರಣದಲ್ಲಿ ಬಸ್ ಬದಲು ಸರಕು

ಮುಂಬೈ| ಮತ್ತೊಂದು ನಿರ್ಭಯಾ ಮಾದರಿ ಪ್ರಕರಣ| ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ರಾಡ್ ತುರುಕಿದ ಪಾಪಿ Read More »