ಸುಳ್ಯ| ನಾಪತ್ತೆಯಾಗಿ ಎರಡು ದಿನ ಕಳೆದರೂ ಪತ್ತೆಯಾಗದ ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ| ಸಾಲಬಾಧೆಯಿಂದ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾದರಾ ರಾಜೇಶ್ ಗುಂಡಿಗದ್ದೆ?
ಸುಳ್ಯ : ಬೆಳ್ಳಾರೆಯ ಉದ್ಯಮಿ ರಾಜೇಶ್ ಗುಂಡಿಗದ್ದೆ (47) ಯವರು ಸೆ. 4 ರಿಂದ ಮನೆಗೆ ಬಾರದೇ ನಾಪತ್ತೆಯಾಗಿರುವ ಬಗ್ಗೆ ಅವರ ಪತ್ನಿ ವಿನಯಶ್ರೀಯವರು ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಎರಡು ದಿನ ಕಳೆದರೂ ಪತ್ತೆಯಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸೆ. 5 ರಂದು ರಾಜೇಶ್ ಪತ್ನಿ ವಿನಯಶ್ರೀ ಅವರು ಠಾಣೆಗೆ ದೂರು ನೀಡಿದ್ದು, ಸುಳ್ಯ ಪೇಟೆಗೆ ಬರುವುದಾಗಿ ಹೇಳಿ ಹೋದವರು ಮನೆಗೆ ಬಾರದೆ, ಫೋನ್ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿರುವುದಾಗಿ ಅದರಲ್ಲಿ ತಿಳಿಸಲಾಗಿದೆ. […]