ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ದಿನಗಣನೆ| ಈ ಬಾರಿ ಮಾಜಿ ಸಿಎಂ ಎಸ್ ಎಂ ಕೃಷ್ಣರಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು: ನಾಡ ಹಬ್ಬ ದಸರಾ ಉದ್ಘಾಟಕರ ಹೆಸರು ಘೋಷಣೆಯಾಗಿದ್ದು ಈ ಬಾರಿಯ ದಸರಾ ಹಬ್ಬವನ್ನು ಮಾಜಿ ಸಿಎಂ ಎಸ್.ಎಂ ಕೃಷ್ಣ ಉದ್ಘಾಟಿಸಲಿದ್ದಾರೆ. ಮಂಗಳವಾರ (ಸೆ.28) ಸಂಜೆ ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ. ಅಕ್ಟೋಬರ್ 7 ರಿಂದ ಪ್ರಾರಂಭವಾಗಲಿರುವ ದಸರಾ […]