ನವದೆಹಲಿ: ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿಗಾಗಿ ಬಿಡ್ ನಡೆಸಲಾಯಿತು. ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದ ಬಿಡ್ಡ್ ನಲ್ಲಿ ಅಂತಿಮವಾಗಿ ಟಾಟಾ ಸನ್ಸ್ ಖರೀದಿಸುವಲ್ಲಿ ಸಫಲವಾಗಿದೆ.
ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿತು. ಸ್ವಾತಂತ್ರ್ಯಾನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣಗೊಳಿಸಲಾಯಿತು ಮತ್ತು ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು.
ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಯಿತು ಮತ್ತು ಜುಲೈ 29, 1946 ರಂದು ಏರ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು. 1953 ರಲ್ಲಿ, ಸರ್ಕಾರವು ಏರ್ ಕಾರ್ಪೊರೇಷನ್ ಕಾಯ್ದೆಯನ್ನು ಅಂಗೀಕರಿಸಿತು ಮತ್ತು ಕಂಪನಿಯ ಸ್ಥಾಪಕ ಜೆಆರ್ ಡಿ ಟಾಟಾ ಅವರಿಂದ ಮಾಲೀಕತ್ವದ ಹಕ್ಕುಗಳನ್ನು ಖರೀದಿಸಿತು. ನಂತರ ಈ ಕಂಪನಿಯನ್ನು ಏರ್ ಇಂಡಿಯಾ ಇಂಟರ್ ನ್ಯಾಷನಲ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಯಿತು. ಹೀಗಾಗಿ ಟಾಟಾ ಗ್ರೂಪ್ 68 ವರ್ಷಗಳ ನಂತರ ಮತ್ತೊಮ್ಮೆ ತನ್ನ ಸ್ವಂತ ಕಂಪನಿಯನ್ನು ಹಿಂತೆಗೆದುಕೊಂಡಿದೆ.