Ad Widget .

ಇಂದು ನೂತನ ಜಿಲ್ಲೆ ವಿಜಯನಗರ ಉದ್ಘಾಟನೆ

ಹೊಸಪೇಟೆ: ರಾಜ್ಯದ 31ನೇ ಜಿಲ್ಲೆಯಾಗಿ ಉದಯಗೊಂಡಿರುವ ವಿಜಯನಗರದ ಅಧಿಕೃತ ಉದ್ಘಾಟನಾ ಸಮಾರಂಭ ಶನಿವಾರ (ಅ. 2) ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

Ad Widget . Ad Widget .

ಕಾರ್ಯಕ್ರಮ ನಡೆಯಲಿರುವ ಜಿಲ್ಲಾ ಕ್ರೀಡಾಂಗಣ ಮಿನಿ ಹಂಪಿಯಾಗಿ ಬದಲಾಗಿದೆ. ಬೆಟ್ಟ-ಗುಡ್ಡ, ವಿರೂಪಾಕ್ಷೇಶ್ವರ ದೇವಸ್ಥಾನ, ಸಾಲು ಮಂಟಪ, ಉಗ್ರ ನರಸಿಂಹ, ಸಪ್ತಸ್ವರ ಮಂಟಪ ನಿರ್ಮಿಸಲಾಗಿದೆ.

Ad Widget . Ad Widget .

ಪ್ರವೇಶ ದ್ವಾರದ ಮುಂಭಾಗದಲ್ಲಿ 40 ಅಡಿ ಎತ್ತರದ ಶ್ರೀಕೃಷ್ಣದೇವರಾಯನ ಫೈಬರ್‌ ಪುತ್ಥಳಿ ಪ್ರತಿಷ್ಠಾಪಿಸಲಾಗಿದೆ. ನಗರದ ಎಲ್ಲಾ ರಸ್ತೆಗಳಿಗೆ ವಿದ್ಯುತ್‌ ದೀಪಗಳ ಅಲಂಕಾರ ಮಾಡಲಾಗಿದೆ. ತಳಿರು ತೋರಣ ಕಟ್ಟಲಾಗಿದೆ.

ಶನಿವಾರ ಸಂಜೆ 6ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಜಿಲ್ಲೆ ಉದ್ಘಾಟಿಸುವರು. ಜಿಲ್ಲೆ ಘೋಷಣೆ ಮಾಡಿದ ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್‌. ಯಡಿಯೂರಪ್ಪನವರ ಸನ್ಮಾನ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅಧ್ಯಕ್ಷತೆ ವಹಿಸುವರು. ಕಲಾ ತಂಡಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

Leave a Comment

Your email address will not be published. Required fields are marked *