Ad Widget .

ಸೆಕ್ಸ್ ಗೆ ವಿರೋಧಿಸಿದ್ದಕ್ಕೆ ಬೆಂಕಿ ಹಚ್ಚಿ ಕೊಂದ ಪಾತಕಿ

Ad Widget . Ad Widget .

ಯಾದಗಿರಿ: ಲೈಂಗಿಕ ಸಂಪರ್ಕಕ್ಕೆ ವಿರೋಧಿಸಿದ್ದಕ್ಕೆ ವ್ಯಕ್ತಿಯೊಬ್ಬ ರಾತ್ರಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾಳೆ.

Ad Widget . Ad Widget .

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಧ್ಯರಾತ್ರಿ ವಿವಾಹಿತ ಮಹಿಳೆ ಬಾಲಮ್ಮ ತೀವ್ರ ಗಾಯಗೊಂಡಿದ್ದು, ಸೋಮವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಆರೋಪಿ ಗಂಗಪ್ಪ ನಾಪತ್ತೆಯಾಗಿದ್ದಾನೆ.

ಗಂಗಪ್ಪ ಹಲವು ದಿನಗಳಿಂದ ಅಕ್ರಮ ಸಂಬಂಧಕ್ಕಾಗಿ ಮಹಿಳೆ ಮೇಲೆ ಹಿಂದೆ ಬಿದ್ದಿದ್ದ. ಆದರೆ ಈತನ ಮಾತಿಗೆ ಒಪ್ಪದ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳಲು ತಡರಾತ್ರಿ ಗಂಡ ಇಲ್ಲದ ಸಮಯದಲ್ಲಿ ಮತ್ತೆ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಆಕೆಯ ಮೇಲೆ ಪೈಶಾಚಿಕ ಕೃತ್ಯ ಮೆರೆದಿದ್ದಾನೆ.

ಹೊರಗಡೆ ನಿಲ್ಲಿಸಿದ್ದ ಬೈಕ್ ನಿಂದ ಪೆಟ್ರೋಲ್ ತಂದು ಮಹಿಳೆಯ ಮೇಲೆ ಹಾಕಿ ಬೆಂಕಿ ಹಚ್ಚಿದ್ದಾನೆ. ಆಕೆ ಹೊರಗಡೆ ಬರಬಾರದು ಅಂತ ಬಾಗಿಲು ಕೂಡಾ ಬಂದ್ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದ. ಮಹಿಳೆಯ ಬಹುತೇಕ ದೇಹದ ಭಾಗ ಸುಟ್ಟು ಹೋಗಿತ್ತು.

ಸುರಪುರ ತಾಲೂಕು ಆಸ್ಪತ್ರೆಯಲ್ಲಿ, ಚಿಕಿತ್ಸೆ ನೀಡಿದ ಬಳಿಕ ಮಹಿಳೆಯನ್ನ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದ್ರೆ ಮಹಿಳೆಗೆ ಚಿಕಿತ್ಸೆ ಫಲಕಾರುಯಾಗದೆ ಕಲಬುರಗಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಇತ್ತ ಮಹಿಳೆಯ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಸುರಪುರ ಪೊಲೀಸರು ಆರೋಪಿಯ ಗಂಗಪ್ಪನ ಮೇಲೆ ಪ್ರಕರಣ ದಾಖಲಿಸಿಕೊಂಡು, ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿರಿ….

Leave a Comment

Your email address will not be published. Required fields are marked *