Ad Widget .

ಪಿಡಿಒ ನಿಂದ ರಾಷ್ಟ್ರಪತಿವರೆಗೆ ಆರೆಸ್ಸೆಸ್ ಕಾರ್ಯಕರ್ತರು ಇದ್ದಾರೆ – ಕುಮಾರಸ್ವಾಮಿ ಹೇಳಿಕ್ಕೆ ವಿ. ಸುನಿಲ್ ಕುಮಾರ್ ತಿರುಗೇಟು

Ad Widget . Ad Widget .

ಉಡುಪಿ: ದೇಶದ 4000 ಐಎಎಸ್ ಐಪಿಎಸ್ ಗಳು, RSS ಕಾರ್ಯಕರ್ತರು ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕ್ಕೆ ಒಂದು ನೀಡಿದ್ದರು. ಇದೀಗ ಆ ಮಾತಿಗೆ ತಿರುಗೇಟು ನೀಡಿದ ಇಂಧನ ಸಚಿವ ವಿ. ಸುನಿಲ್ ಕುಮಾರ್ ಕೇವಲ 4000 ಅಲ್ಲ ಅದಕ್ಕೂ ಹೆಚ್ಚು ಜನ ಆರೆಸ್ಸೆಸ್ ನವರಿದ್ದು, ಅವರ ಲೆಕ್ಕಾಚಾರ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.

Ad Widget . Ad Widget .

ಆರೆಸ್ಸೆಸ್ ಒಂದು ವ್ಯಕ್ತಿಯನ್ನು ನಿರ್ಮಾಣಮಾಡುವ ಸಂಘಟನೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆ. ನಮ್ಮಂಥ ಅನೇಕ ವ್ಯಕ್ತಿಗಳನ್ನು ಆರೆಸ್ಸೆಸ್ ತಯಾರು ಮಾಡಿದೆ. ವ್ಯಕ್ತಿತ್ವ ನಿರ್ಮಾಣ ಮಾಡಿಕೊಂಡವರು ಬೇರೆಬೇರೆ ಕ್ಷೇತ್ರದಲ್ಲಿದ್ದಾರೆ, ಸಾವಿರಾರು ಮಂದಿ ವಿವಿಧ ಕ್ಷೇತ್ರಗಳಲ್ಲಿ ಇದ್ದಾರೆ. ಬರೇ ಐಎಎಸ್ ಐಪಿಎಸ್ ಗಳು ಮಾತ್ರ ಅಲ್ಲ, ಪಿಡಿಒ ನಿಂದ ರಾಷ್ಟ್ರಪತಿವರೆಗೆ ಆರೆಸ್ಸೆಸ್ ಕಾರ್ಯಕರ್ತರು ಇದ್ದಾರೆ. ಎಲ್ಲರ ಮುಖಾಂತರ ರಾಷ್ಟ್ರ ನಿರ್ಮಾಣ ಮಾಡುವ ಗುರಿ ಇದೆ, ರಾಷ್ಟ್ರ ನಿರ್ಮಾಣದ ಪರ ಇರುವವರು ಇದನ್ನು ಸ್ವಾಗತಿಸುತ್ತಾರೆ. ರಾಷ್ಟ್ರ ನಿರ್ಮಾಣದ ಕನಸು ಇಲ್ಲದವರು ವಿರೋಧಿಸುತ್ತಾರೆ. ಈ ರೀತಿ ಮಾತನಾಡುವವರ ಬಗ್ಗೆ ಅನುಕಂಪವಿದೆ.

ಅಪ್ಪ ಮಕ್ಕಳು ಬೇರೆ ಬೇರೆ ಸಂದರ್ಭದಲ್ಲಿ ಬೇರೆ-ಬೇರೆ ರೀತಿ ಮಾತನಾಡುತ್ತಾರೆ. ಆರೆಸ್ಸೆಸ್ ಹೆಸರನ್ನು ಬೇಕಾದಂತೆ ಬಳಸಿಕೊಂಡಿದ್ದಾರೆ. ಅವರಿಗೆ ಬೇಕಾದಂತೆ ಬಳಸಿಕೊಳ್ಳುವ ಸಂಘಟನೆ ಆರೆಸ್ಸೆಸ್ ಅಲ್ಲ. ಕುಮಾರಸ್ವಾಮಿ ಹೇಳಿದರು ಅಂತ ಈ ಕೆಲಸ ನಿಲ್ಲೋದಿಲ್ಲ, ಈ ಕೆಲಸ ಇನ್ನಷ್ಟು ವೇಗ ಪಡೆದುಕೊಳ್ಳಲಿದೆ ಎಂದರು.

Leave a Comment

Your email address will not be published. Required fields are marked *