ಮೈಸೂರು : ರಾಜ್ಯದ ರೈತ ಸಮುದಾಯಕ್ಕೆ ಸಿಎಂ ಸಿಹಿಸುದ್ದಿ ನೀಡಿದ್ದು, ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯ ಮರು ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಮೈಸೂರು ದಸರಾ ಉದ್ಘಾಟನೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ ಯಶಸ್ವಿ ಯೋಜನೆಯನ್ನು ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಇದೀಗ ಈ ಯೋಜನೆಯನ್ನು ಮರು ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಯಶಸ್ವಿ ಯೋಜನೆಯು ಗ್ರಾಮೀಣಾ ಸಹಕಾರಿಗಳ ಆರೋಗ್ಯ ಸುರಕ್ಷತಾ ಯೋಜನೆಯಾಗಿದ್ದು,ಯಾವುದೇ ಸಂಘದ ಸದಸ್ಯರು ಕನಿಷ್ಟ ಮೊತ್ತದ ಪ್ರೀಮಿಯಂ ಪಾವತಿಸಿ ತಮ್ಮ ಕುಟುಂಬದವರ ಹೆಸರು ನೋಂದಣಿ ಮಾಡಿಸಿಕೊಂಡರೆ ಹಲವು ವಿಧದ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಮಾಡಿಸಿಕೊಳ್ಳಬಹುದು.