Ad Widget .

‘ಸಂಚಿ ಹೊನ್ನಮ್ಮ’ ವಿದ್ಯಾರ್ಥಿವೇತನಕ್ಕೆ ಪದವಿ‌ ವಿದ್ಯಾರ್ಥಿಗಳಿಂದ ಅರ್ಜಿ‌ ಅಹ್ವಾನ

Ad Widget . Ad Widget .

ಬೆಂಗಳೂರು : 2021-22 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿ.ಎ ಹಾಗೂ ಬಿ.ಕಾಂ ವಿದ್ಯಾರ್ಥಿನಿಯರಿಗೆ ಸಂಚಿ ಹೊನ್ನಮ್ಮ ವಿದ್ಯಾರ್ಥಿ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ.

Ad Widget . Ad Widget .

2021 ರಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ 2021-22 ನೇ ಸಾಲಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜಿನಲ್ಲಿ ಪ್ರಥಮ ಬಿಎ/ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿಯಲ್ಲಿ ಕನಿಷ್ಟ 75%ಅಂಕಗಳನ್ನು ಪಡೆದಿರಬೇಕು. ಈ ವಿದ್ಯಾರ್ಥಿ ವೇತನವನ್ನು ಸರ್ಕಾರಿ ಶಾಲೆಗಳಲ್ಲಿ 1 ರಿಂದ 7 ನೇ ತರಗತಿವರೆಗೆ ಓದಿದ ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತಗೊಳಿಸಲಾಗಿದೆ.

ಅರ್ಜಿ ನಮೂನೆಗಳನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಿ ಹಾಗೂ ಕಾಲೇಜಿನ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರಕಟಿಸಿ , ನಂತರ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 31:10:2021ರೊಳಗಾಗಿ ಪ್ರಾದೇಶಿಕ ಜಂಟಿ ನಿರ್ದೇಶಕರ ಕಛೇರಿ, ಮಂಗಳೂರು ಇಲ್ಲಿಗೆ ಕಳುಹಿಸಲು ಕಾಲೇಜು ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ

Leave a Comment

Your email address will not be published. Required fields are marked *