Ad Widget .

ಭಾರೀ ಮಳೆಗೆ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜ್ಯಾಂ| ಮುಳುಗಿದ ವಾಹನಗಳು

Ad Widget . Ad Widget .

ಬೆಂಗಳೂರು: ನಗರದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದ ಟ್ಯಾಕ್ಸಿ ಮತ್ತು ಕಾರುಗಳಿಗೆ ಹಾನಿಯಾಗಿದ್ದು, ನಗರದ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ವಿಮಾನ ನಿಲ್ದಾಣದ ಸುತ್ತಾಮುತ್ತ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿತ್ತು. ಇಂಜಿನ್ ಗಳಿಗೆ ನೀರು ನುಗ್ಗಿ ಸುಮಾರು 20ಕ್ಕೂ ಹೆಚ್ಚು ಕಾರುಗಳು ಕೆಟ್ಟು ನಿಂತಿವೆ.

Ad Widget . Ad Widget .

ಅದಲ್ಲದೆ ಭಾರಿ ಮಳೆಯಿಂದ ಟರ್ಮಿನಲ್ ಮುಂಭಾಗ ನೀರು ನಿಂತಿತ್ತು. ಟರ್ಮಿನಲ್ ಬಳಿ 2 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿತ್ತು. ಸದ್ಯ ಸಹಜ ಸ್ಥಿತಿಗೆ ಮರಳಿದ ವಿಮಾನ ನಿಲ್ದಾಣ ರಸ್ತೆಯಲ್ಲಿ ನಿಂತಿದ್ದ ಭಾರಿ ಪ್ರಮಾಣದ ನೀರು ಕಡಿಮೆಯಾಗಿದೆ. ರಾತ್ರಿ ಏರ್ಪೋಟ್ ಸಿಬ್ಬಂದಿ ನೀರು ಹರಿದು ಹೋಗಲು ಕಾಲುವೆ ಮಾಡಿ ನೀರು ಖಾಲಿ ಮಾಡಿದ್ದಾರೆ.

Leave a Comment

Your email address will not be published. Required fields are marked *