Ad Widget .

ಅ.13 ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಸಿಎಂ ಭೇಟಿ ಹಿನ್ನೆಲೆ| ಕ್ಷೇತ್ರದಲ್ಲಿ ಬಿಗಿ ಬಂದೋಬಸ್ತ್, ಭಕ್ತರಿಗೆ ಪ್ರವೇಶ ನಿಷೇಧ

Ad Widget . Ad Widget .

ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರು ನವರಾತ್ರಿ ಮಹೋತ್ಸವ ಹಾಗೂ ಮಂಗಳೂರು ದಸರಾ ಹಿನ್ನೆಲೆಯಲ್ಲಿ ಅ. 13ರಂದು ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ಈ ಹಿನ್ನೆಲೆಯಲ್ಲಿ ಬಿಗಿ ಬಂದೋ ಬಸ್ತ್ ಮಾಡಲಾಗಿದೆ. ಅ. 13ರಂದು ಸಂಜೆ 3 ಗಂಟೆಯಿಂದ 7 ಗಂಟೆಯವರೆಗೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು, ಭಕ್ತರು ಸಹಕರಿಸಲು ಕೋರಲಾಗಿದೆ.

Ad Widget . Ad Widget .

ಬೆಳಗ್ಗೆ 10 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಅವರು 11 ಗಂಟೆಗೆ ಉಡುಪಿಗೆ ತೆರಳಿ, ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಉಡುಪಿಯಿಂದ ಹೊರಟು 5 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವಕ್ಕೆ ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕರು ಇರಲಿದ್ದು, ಸಂಜೆ 6.55ಕ್ಕೆ ವಿಮಾನ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಧಿಕಾರಿಗಳಿಂದ ತಪಾಸಣೆ

ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಆಗಮನ ಹಿನ್ನೆಲೆಯಲ್ಲಿ ಮಂಗಳವಾರ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿರೇ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿ ಆಡಳಿತ ಮಂಡಳಿಯ ಜತೆ ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

ಈ ಸಂದರ್ಭ ಮಂಗಳೂರು ಉಪವಿಭಾಗಧಿಕಾರಿ ಮದನ್‌ ಮೋಹನ್, ಮಂಗಳೂರು ನಗರ ಕಾನೂನು ಸುವ್ಯವಸ್ಥಾ ವಿಭಾಗದ ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್, ಸಂಚಾರ ಮತ್ತು ಅಪರಾಧ ವಿಭಾಗದ ಉಪಪೊಲೀಸ್ ಆಯುಕ್ತ ದಿನೇಶ್ ಕುಮಾರ್, ಸಂಚಾರ ಮತ್ತು ಅಪರಾಧ ವಿಭಾಗದ ಎಸಿಪಿ ನಟರಾಜ್, ಕೇಂದ್ರ ಉಪವಿಭಾಗದ ಎಸಿಪಿ ಪರಮೇಶ್ವರ್ ಅನಂತ್ ಹೆಗ್ಡೆ, ಉತ್ತರ ವಿಭಾಗ ಎಸಿಪಿ ಮಹೇಶ್ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ದಸರಾ ಮಹೋತ್ಸವಕ್ಕೆ ಬುಧವಾರ ಸಂಜೆ 5ಗಂಟೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಜೆ ವೇಳೆ ಕ್ಷೇತ್ರಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ರಾತ್ರಿ 7ರಿಂದ ಎಂದಿನಂತೆ ದರುಶನಕ್ಕೆ ಅವಕಾಶ ನೀಡಲಾಗುವುದು. ಮುಖ್ಯಮಂತ್ರಿ ಆಗಮಿಸುವ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಹಾಗೂ ಹಿರಿಯ ಅಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಕ್ತರು ಸಹಕರಿಸಬೇಕೆಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *