ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 190 ಹುದ್ದೆಗಳಿಗೆ ನೇರ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಗ್ರೂಪ್ ಡಿ ದರ್ಜೆಯ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಂಗಳೂರಿನಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನ.23ಕ್ಕೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ.
ಹುದ್ದೆ ವಿವರ :
ಪೌರ ಕಾರ್ಮಿಕರ ಹುದ್ದೆಗೆ 190.
ವಯೋಮಿತಿ ಕನಿಷ್ಠ 18- ಗರಿಷ್ಠ 45 ವರ್ಷದೊಳಗಿನವರು ಮಾತ್ರ ಅರ್ಜಿ ಸಲ್ಲಿಸಬಹುದು.
ವೇತನ: 17000-28950 ತನಕ
ಅರ್ಹತೆ: ಈ ಹುದ್ದೆಗೆ ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು.
ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಅಂಗವಿಕಲರಿಗೆ ಅರ್ಜಿ ಶುಲ್ಕ 100 ರೂ ಆಗಿದೆ.
ಸಾಮಾನ್ಯ ಇತರೆ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 200 ರೂ ಆಗಿದೆ. ಅರ್ಜಿ ಶುಲ್ಕ ಪಾವತಿಸಲು ಕಡೆಯ ದಿನಾಂಕ ನವೆಂಬರ್ 23 ಆಗಿದೆ.
ಅರ್ಜಿ ಸಲ್ಲಿಕೆ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು,
ಮಂಗಳೂರು ಮಹಾನಗರ ಪಾಲಿಕೆ ಈ ವೆಬ್ ತಾಣಕ್ಕೆ ಭೇಟಿ ನೀಡಿ, ಅರ್ಜಿ ಸಲ್ಲಿಸುವ ಮೊದಲು ವೆಬ್‌ಸೈಟ್‌ನಲ್ಲಿರುವ ಪಿಎಫ್ ಚಲನ್ ಡೌನ್‌ಲೋಡ್ ಮಾಡಿಕೊಳ್ಳಬೇಕು.
ಕೆನರಾ ಬ್ಯಾಂಕ್‌ನ ಯಾವುದೇ ಶಾಖೆಯಲ್ಲಿ ನಿಗದಿತ ಶುಲ್ಕ ಪಾವತಿ ಮಾಡಬೇಕು. ಶುಲ್ಕ ಪಾವತಿಸಿದ ಬಳಿಕ ಚಲನ್ ಪ್ರತಿಯನ್ನ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವೇಳೆ ಇತರೆ ದಾಖಲೆಗಳೊಂದಿಗೆ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಹಾನಗರ ಪಾಲಿಕೆಯಲ್ಲಿನ ಸಹಾಯ ಕೇಂದ್ರ ಅಥವಾ ಜಿಲ್ಲೆಯ ನಾಗರೀಕ ಸೇವಾ ಕೇಂದ್ರಗಳಲ್ಲಿಯ ಸೇವೆ ಬಳಸಬಹುದು.