Ad Widget .

ಆರ್ಯನ್ ಡ್ರಗ್ಸ್ ಸೇವನೆ ವಿಚಾರ ಬಹಿರಂಗಗೊಳಿಸಿದ ವಕೀಲರು| ಎಷ್ಟು ವರ್ಷದಿಂದ ಅಮಲು ಸೇವನೆ ಗೊತ್ತಾ?

Ad Widget . Ad Widget .

ಮುಂಬೈ : ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿರುವ ಮುಂಬೈ ಸೆಷನ್ಸ್ ಕೋರ್ಟ್ ಮುಂದೆ ಎನ್‍ಬಿಸಿ ಪರ ವಕೀಲ ಎಎಸ್‍ಜಿ ಅನಿಲ್‌ ಸಿಂಗ್‌ ಮಹತ್ವದ ಅಂಶದೊಂದಿಗೆ ವಾದ ಆರಂಭಿಸಿದ್ದಾರೆ.ಶಾರೂಖ್ ಖಾನ್ ಮಗ ಆರ್ಯನ್ ಖಾನ್ ಮೂರು ವರ್ಷಗಳಿಂದ ಡ್ರಗ್ ಸೇವಿಸುತ್ತಿದ್ದಾರೆ ಎಂದು ವಕೀಲರು ಹೇಳಿದ್ದಾರೆ.

Ad Widget . Ad Widget .

ಹಡಗಿನಲ್ಲಿ ರೇವ್ ಪಾರ್ಟಿ ನಡೆಸಿದ ಆರೋಪದಲ್ಲಿ ಎನ್‍ಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್ ಹಾಗೂ ಇತರೆ ಆರೋಪಿಗಳು ಜಾಮೀನು ಕೋರಿ ಮುಂಬೈ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಯುತ್ತಿದ್ದು ನ್ಯಾ.ವಿವಿ ಪಾಟೀಲ್ ಸುದೀರ್ಘ ವಾದ ಆಲಿಸುತ್ತಿದ್ದಾರೆ.

ಎನ್ ‍ ಸಿಬಿ ಪರ ವಕೀಲ ಅನೀಲ್ ಸಿಂಗ್ , ಆರ್ಯನ್ ಖಾನ್ ನಿಯಮಿತವಾಗಿ ಡ್ರಗ್ ಸೇವನೆ ಮಾಡುತ್ತಿದ್ದಾರೆ . ಮಾಹಿತಿಗಳ ಪ್ರಕಾರ ಮೂರು ವರ್ಷದಿಂದ ಮಾಧಕ ವಸ್ತುಗಳ ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ . ಇದಕ್ಕೆ ಪೂರಕ ಎನ್ನುವಂತೆ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಬಳಿಕ ಮಾದಕ ವಸ್ತು ಪತ್ತೆಯಾಗಿದ್ದು , ಆರ್ಯನ್ ಖಾನ್ ಕೂಡಾ ಮಾದಕ ವ್ಯಸನಿ ಎನ್ನುವುದು ಸೂಚಿಸುತ್ತಿದೆ ಎಂದು ವಾದಿಸಿದ್ದಾರೆ .

Leave a Comment

Your email address will not be published. Required fields are marked *