Ad Widget .

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಮಾಜಿ ಪಿಎಂ ಮನಮೋಹನ್ ಸಿಂಗ್| ಏಮ್ಸ್ ವೈದ್ಯರಿಂದ ಮಾಹಿತಿ|

Ad Widget . Ad Widget .

ನವದೆಹಲಿ: ಬುಧವಾರ ಸಂಜೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

Ad Widget . Ad Widget .

AIMS ಆಸ್ಪತ್ರೆಯಲ್ಲಿ ಮನಮೋಹನ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದು, ಹೃದ್ರೋಗ ತಜ್ಞರ ತಂಡ, ನಿತೀಶ್ ನಾಯಕ್ ಅವರ ಮಾರ್ಗದರ್ಶನದಲ್ಲಿ ಅವರ ವೈಯಕ್ತಿಕ ವೈದ್ಯಾಧಿಕಾರಿ, ಹಲವು ವರ್ಷಗಳಿಂದ ಮಾಜಿ ಪ್ರಧಾನಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಐಎಎನ್‌ಎಸ್ ಜೊತೆ ಮಾತನಾಡಿದ ಏಮ್ಸ್ ಅಧಿಕಾರಿ, ಕಾಂಗ್ರೆಸ್ ನಾಯಕನ ಆರೋಗ್ಯ ಸ್ಥಿತಿ ಕ್ರಮೇಣ ಸುಧಾರಿಸುತ್ತಿದೆ. ಅವರ ಪ್ಲೇಟ್‌ ಲೆಟ್‌ ಗಳು ಹೆಚ್ಚುತ್ತಿವೆ ಮತ್ತು ಈಗ ಅಪಾಯದಿಂದ ಹೊರಬಂದಿದ್ದಾರೆ ಎಂದಿದ್ದಾರೆ.

ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ಮಾಜಿ ಕೇಂದ್ರ ಸಚಿವ ಅಶ್ವನಿ ಕುಮಾರ್, ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ, ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್, ಶಿವಸೇನೆ ನಾಯಕ ಪ್ರಿಯಾಂಕ ಚತುರ್ವೇದಿ, ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಸೇರಿದಂತೆ ಹಲವು ರಾಜಕೀಯ ನಾಯಕರು ಮತ್ತು ಇತರ ಗಣ್ಯರು ಮನಮೋಹನ್ ಸಿಂಗ್ ಅವರ ಆರೋಗ್ಯ ವಿಚಾರಿಸಿದ್ದಾರೆ.

Leave a Comment

Your email address will not be published. Required fields are marked *