Ad Widget .

ಮಾಜಿ ಕ್ರಿಕೆಟ್ ತಾರೆ ಯುವರಾಜ್ ಸಿಂಗ್ ಬಂಧನ

ನವದೆಹಲಿ: ಜಾತಿ ನಿಂದನೆ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಕಳೆದ ವರ್ಷ ರೋಹಿತ್ ಶರ್ಮಾ ಜೊತೆಗಿನ ಸಂವಾದದಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಯುವಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಪೊಲೀಸ್ ಠಾಣೆಯಲ್ಲಿ ಯುವರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿರುವ ಹಂಸಿ ಠಾಣಾ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸಿದರು. ಆ ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಔಪಚಾರಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

Ad Widget . Ad Widget .

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಲವು ದಿನಗಳ ಹಿಂದೆ ಯುವರಾಜ್ ಸಿಂಗ್ ಹೈಕೋರ್ಟ್​​ಗೆ ನಿರೀಕ್ಷಣಾ ಜಾಮೀನಿಗೆ ಮನವಿ ಸಲ್ಲಿಸಿದ್ದರು. ಈ ಕಾರಣದಿಂದಾಗಿ, ಹಂಸಿ ಪೊಲೀಸರು ಆತನನ್ನು ಔಪಚಾರಿಕವಾಗಿ ಬಂಧಿಸಿ 3 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಆ ಬಳಿಕ ನಿರೀಕ್ಷಣಾ ಜಾಮೀನು ಪತ್ರಗಳ ಆಧಾರದ ಮೇಲೆ ಬಿಡುಗಡೆ ಮಾಡಿದ್ದಾರೆ.

Leave a Comment

Your email address will not be published. Required fields are marked *