ಬೆಂಗಳೂರು: ಈದ್ ಮಿಲಾದ್ ಹಬ್ಬ ಆಚರಿಸುವ ಪ್ರಯುಕ್ತ ಈ ಹಿಂದೆ ಅ.20ರಂದು ರಜೆ ಘೋಷಿಸಲಾಗಿದ್ದ ರಜೆಯನ್ನು ಮೂನ್ ಕಮಿಟಿಯ ತೀರ್ಮಾನದಂತೆ ದಿನಾಂಕ ಅ.19ರಂದು ಬದಲಿಸಿ, ಸಾರ್ವತ್ರಿಕ ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ಅಧಿಸೂಚನೆ ಹೊರಡಿಸಿದ್ದು, 2021ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ದಿನಾಂಕ 21-11-2020ರಂದು ಪ್ರಕಟಿಸಲಾಗಿತ್ತು.
ಈ ರಜಾ ದಿನಗಳ ಪಟ್ಟಿಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಿನಾಂಕ 20-10-2021ರಂದು ಸಾರ್ವತ್ರಿಕ ರಜೆಯನ್ನು ಮಂಜೂರು ಮಾಡಲಾಗಿದೆ. ಆದರೆ ಈದ್ ಮಿಲಾದ್ ಹಬ್ಬವನ್ನು ಅ.19ರಂದು ಆಚರಿಸಲು ಮೂನ್ ಕಮಿಟಿಯು ತೀರ್ಮಾನಿಸಿರುವುದರಿಂದ, ಅ. 19ರಂದು ಸಾರ್ವತ್ರಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ.