ಮಂಗಳೂರು: ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಕೊಲೆ ಪ್ರಕರಣ – ನಾಲ್ವರು ಪೊಲೀಸ್ ವಶಕ್ಕೆ

Ad Widget ... ..

ಮಂಗಳೂರು: ನಗರದ ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಪಾರ್ಟಿ ನೆಪದಲ್ಲಿ ಯುವಕನೊಬ್ಬನ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Ad Widget

ಸುರತ್ಕಲ್ ನಿವಾಸಿ ಜೇಸನ್ (25) ವಶಕ್ಕೆ ಪಡೆದ ಆರೋಪಿ. ಅ.15 ರಂದು ರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್,ಪ್ರಜ್ವಲ್ ಎಂಬವರು ತೆರಳಿದ್ದರು. ಸರಿಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್ ಮತ್ತು ಧನುಷ್ ಎಂಬುವರ ಮಧ್ಯೆ ಜಗಳವಾಗಿದ್ದು, ಈ ವೇಳೆ ಜೇಸನ್ ಸುರತ್ಕಲ್ ಎಂಬಾತನು ತನ್ನಲ್ಲಿರುವ ಹರಿತವಾದ ಆಯುಧದಿಂದ ಧನುಷ್ ಗೆ ಚುಚ್ಚಿದ್ದಾನೆ ಎನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಧನುಷ್ ನನ್ನು ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿದ್ದ ಎಂದು ದೂರಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಜೇಸನ್ ಸೇರಿದಂತೆ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದರು. ಇನ್ನೊಬ್ಬ ಆರೋಪಿಗೆ ಶೋಧ ಮುಂದುವರಿದಿದೆ.

Leave a Comment

Your email address will not be published. Required fields are marked *