Ad Widget .

ಕಾಸರಗೋಡು: ನಾಪತ್ತೆಯಾಗಿದ್ದ ತಾಯಿ – ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ

Ad Widget . Ad Widget .

ಕಾಸರಗೋಡು: ನಾಪತ್ತೆಯಾಗಿದ್ದ ಮಗು ಮತ್ತು ತಾಯಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರ ದಲ್ಲಿ ನಡೆದಿದೆ.

Ad Widget . Ad Widget .

ನೀಲೇಶ್ವರ ಕಡಿಂಙಮೂಲೆಯ ರಮ್ಯಾ (34) ಹಾಗೂ ಎರಡೂವರೆ ವರ್ಷದ ಹೆಣ್ಣು ಮಗು ಮೃತಪಟ್ಟವರು.

ಇಬ್ಬರೂ ಭಾನುವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರು. ಈ ನಡುವೆ ಮನೆ ಸಮೀಪದ ಬಾವಿಯಲ್ಲಿ ಇಂದು ಬೆಳಿಗ್ಗೆ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಕಾಙಂಗಾಡ್ ನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಇಬ್ಬರ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ

. ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗುವುದು ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ರಮ್ಯಾ ಕೆಲ ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೂಲತ: ಕೊಲ್ಲಂ ನಿವಾಸಿಯಾಗಿರುವ ಪ್ರತೀಷ್ ಪತಿಯಾಗಿದ್ದು, ನೀಲೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ

Leave a Comment

Your email address will not be published. Required fields are marked *