Ad Widget .

ಇಂಟರ್ನ್ ಷಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ| ಖ್ಯಾತ ವಕೀಲರ ವಿರುದ್ದ ಎಫ್ ಐ ಆರ್

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಂಗಳೂರು: ಇಂಟರ್ನ್‌ಶಿಪ್‌ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಂಗಳೂರಿನ ಖ್ಯಾತ ವಕೀಲ ಕೆ .ಎಸ್.ಎನ್.ರಾಜೇಶ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

Ad Widget . Ad Widget . Ad Widget .

ಸಂತ್ರಸ್ತ ವಿದ್ಯಾರ್ಥಿನಿಯು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ವಕೀಲರ ವಿರುದ್ಧ ನಿನ್ನೆ ರಾತ್ರಿ ನೀಡಿದ ದೂರಿನ ಮೇರೆಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಪ್ರಕರಣ ಬಯಲಾಗುತ್ತಿದ್ದಂತೆ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದಾರೆ.

ಮಂಗಳೂರು ಎಸಿಬಿ, ಲೋಕಾಯುಕ್ತಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ರಾಜೇಶ್ ಭಟ್, ನಗರದ ಪ್ರಸಿದ್ಧ ಬ್ಯಾಂಕ್‌ಗಳು ಸೇರಿ ಹಲವು ಕಂಪನಿಗಳಿಗೆ ಲೀಗಲ್ ಅಡ್ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜೇಶ್ ಕಚೇರಿಗೆ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಎಲ್‌ಎಲ್‌ಬಿ ವಿದ್ಯಾರ್ಥಿನಿಇಂಟರ್ನ್‌ಶಿಪ್‌ಗೆ ಬರುತ್ತಿದ್ದರು. ಸಂತ್ರಸ್ತ ಯುವತಿ ರಾಜೇಶ್ ವಿರುದ್ಧ ಸೋಮವಾರದಂದು ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಇನ್ನು ಸಂತ್ರಸ್ತೆ ಹಾಗೂ ವಕೀಲರ ನಡುವೆ ನಡೆದ ಫೋನ್ ಸಂಭಾಷಣೆಯೆಂದು ಹೇಳಲಾದ 11 ನಿಮಿಷ 55 ಸೆಕೆಂಡ್ಸ್ ಇರುವ ಆಡಿಯೋ ಒಂದು ವೈರಲ್ ಆಗಿದೆ. ನಾನು ತಪ್ಪು ಮಾಡಿದ್ದೇನೆ, ಕ್ಷಮಿಸಿ ಬಿಡು ಎಂದು ಬೇಡಿಕೊಳ್ಳುವ ಆಡಿಯೋ ಕಳೆದ ಒಂದು ವಾರದಿಂದ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರ್‌ಗೆ ಎಬಿವಿಪಿ ದೂರು ನೀಡಿತ್ತು. ಆಡಿಯೋ ಆಧರಿಸಿ ವಕೀಲರ ವಿರುದ್ಧ ಕ್ರಮಕ್ಕೆ ಮಂಗಳೂರು ಎಬಿವಿಪಿ ಘಟಕ ಆಗ್ರಹಿಸಿತ್ತು.

ಆಡಿಯೋದಲ್ಲಿ ಹಲವುವಿಚಾರಗಳು ಬಹಿರಂಗಗೊಂಡಿದ್ದು, ನನ್ನ ಜೀವದಲ್ಲಿ ಒಂದೇ ಒಂದು ಬಾರಿ ತಪ್ಪು ಮಾಡಿದ್ದೇನೆ. ನನ್ನ ತಪ್ಪು ಕ್ಷಮಿಸಿ ಇಂಟರ್ನ್‌ಶಿಪ್‌ಗೆ ದಯವಿಟ್ಟು ನೀನು ಮೊದಲಿನಂತೆ ನಮ್ಮ ಕಚೇರಿಗೆ ಬಾ. ಸಂಜೆ 6 ಗಂಟೆ ಬಳಿಕ ಕಚೇರಿಯಲ್ಲಿ ಕೆಲಸ ಮಾಡಬೇಡ’ ಎಂದು ಸಂತ್ರಸ್ತ ವಿದ್ಯಾರ್ಥಿನಿಗೆ ವಕೀಲ ರಾಜೇಶ್ ಭಟ್ ಕೋರಿಕೊಂಡಿರುವುದು ಆಡಿಯೋದಲ್ಲಿ ದಾಖಲಾಗಿದೆ. ‘ನೀವು ರೇಪಿಸ್ಟ್‌ಗಿಂತ ಕಡಿಮೆ ಇಲ್ಲ. ನಾನು ಕಚೇರಿಗೆ ಬರಲ್ಲ, ನಿಮ್ಮ ಮುಖ ನೋಡೋಕೆ ಇಷ್ಟವಿಲ್ಲ’ ಎಂದು ಸಂತ್ರಸ್ತ ಯುವತಿ ಪ್ರತಿಕ್ರಿಯೆ ನೀಡಿದ್ದಾರೆ.

‘ಎರಡೂ ಕೈಮುಗಿದು ಬೇಡಿಕೊಳ್ಳುತ್ತೇನೆ ದಯವಿಟ್ಟು ಕ್ಷಮಿಸಿ, ಮತ್ತೆ ಇಂಟರ್ನ್‌ಶಿಪ್‌ಗೆ ಬಾ’ ಎಂದು ರಾಜೇಶ್ ಭಟ್ ಹೇಳಿದಾಗ, ‘ಕಚೇರಿಗೆ ಬಂದ್ರೆ ಕಚೇರಿಯಲ್ಲಿ ರೆಕಾರ್ಡ್ ಆಗಿರುವ ವಿಡಿಯೋ ಡಿಲೀಟ್ ಮಾಡುತ್ತೀರಾ?’ ಎಂದು ಸಂತ್ರಸ್ತೆ ಕೇಳಿದ್ದಾರೆ. ‘2 ಹೆಣ್ಣು ಮಕ್ಕಳ ತಂದೆ ಆಗಿರುವ ನೀವು ಈ ರೀತಿ ಮಾಡಿದ್ದು ತಪ್ಪು. ನನಗೆ ಇನ್ಮುಂದೆ ಫೋನ್ ಮಾಡಬೇಡಿ’ ಎಂದು ಖಡಕ್ ಎಚ್ಚರಿಕೆ ನೀಡಿ ಸಂತ್ರಸ್ತೆ ಫೋನ್ ಕಟ್ ಮಾಡಿರುವುದು ಆಡಿಯೋದಲ್ಲಿ ದಾಖಲಾಗಿದೆ. ಸಂತ್ರಸ್ತೆ ಜತೆ ಮಾತಾಡುತ್ತಾ ಕಣ್ಣೀರಿಟ್ಟಿರುವ ರಾಜೇಶ್ ಭಟ್, ಪರಿಪರಿಯಾಗಿ ಕ್ಷಮಿಸು ಎಂದು ಬೇಡಿಕೊಂಡಿರುವುದೂ ದಾಖಲಾಗಿದೆ.

ವಕೀಲ ರಾಜೇಶ್ ಭಟ್ ವಿರುದ್ಧ ಯುವತಿ ನೀಡಿರುವ ದೂರಿನ ಆಧಾರದಲ್ಲಿ, ಐಪಿಸಿ ಸೆಕ್ಷನ್ 354(A), 354(B), 354(C), 376, 511ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *