Ad Widget .

“ನಳಿನ್ ಗೆ ಹುಚ್ಚು ಹಿಡಿದಿದೆ, ದಯವಿಟ್ಟು ನಿಮ್ಹಾನ್ಸ್ ಗೆ ಸೇರಿಸಿ”| ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ಕಿಡಿಕಾರಿದ‌ ಮಾಜಿ ಸಿಎಂ ಸಿದ್ದರಾಮಯ್ಯ

Ad Widget . Ad Widget .

ಸಿಂದಗಿ: ‘ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್’ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಕೆಂಡ ಕಾರಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Ad Widget . Ad Widget .

ಸಿಂದಗಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಳೀನ್ ಕುಮಾರ್ ಕಟೀಲ್ ಒಬ್ಬ ಬೇಜವಾಬ್ದಾರಿ, ಅಪ್ರಬುದ್ಧ ರಾಜಕಾರಣಿ. ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಹುಚ್ಚನ ತರಹ ಮಾತನಾಡುತ್ತಿದ್ದಾರೆ. ಮೊದಲು ಅವರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದು ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ಬಗ್ಗೆ ನಳೀನ್ ಕಟೀಲ್ ನೀಡಿರುವ ಹೇಳಿಕೆ ಖಂಡನೀಯ. ಜವಾಬ್ದಾರಿ ಸ್ಥಾನದಲ್ಲಿರುವವರು ಇಂಥಹ ಮಾತುಗಳನ್ನಾಡಲು ಸಾಧ್ಯವೇ? ನಳೀನ್ ಕಟೀಲ್ ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ. ಹಾಗಾಗಿ ದಯವಿಟ್ಟು ಕಟೀಲ್ ಅವರನ್ನು ಬಿಜೆಪಿ ವರಿಷ್ಠರು ಆಸ್ಪತ್ರೆಗೆ ಸೇರಿಸಬೇಕು. ಈ ಬಗ್ಗೆ ನಾನು ಜೆ.ಪಿ. ನಡ್ಡಾ ಹಾಗೂ ಅಮಿತ್ ಶಾ ಅವರಲ್ಲಿ ಕೇಳಿಕೊಳ್ಳುತ್ತಿದ್ದೇನೆ ಮೊದಲು ಕಟೀಲ್ ಅವರನ್ನು ನಿಮ್ಹಾನ್ಸ್ ಗೆ ದಾಖಲಿಸಿ ಎಂದು ಹೇಳಿದರು.

Leave a Comment

Your email address will not be published. Required fields are marked *