Ad Widget .

ಮತ್ತೆ ಮತ್ತೆ ಕಂಪಿಸುತ್ತಿರುವ ಬಸವನಾಡು ವಿಜಯಪುರ| ಇದು ಅಪಾಯದ ಮುನ್ಸೂಚನೆಯೇ?

Ad Widget . Ad Widget .

ವಿಜಯಪುರ : ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಆತಂಕದಿಂದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

Ad Widget . Ad Widget .

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಸೇರಿ ಹಲವು ಗ್ರಾಮಗಳಲ್ಲಿ ಇಂದು ಬೆಳಗ್ಗೆ 10.30 ರ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು, ಜನರು ಆತಂಕದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೂಕಂಪನ‌ ಅನುಭವ ಆಗುತ್ತಿರುವ ಕಾರಣ ಜನರಲ್ಲಿ ಆತಂಕ ಮನೆ ಮಾಡಿದ್ದು, ಇಂದು ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮಕ್ಕೆ ನ್ಯಾಶನಲ್ ಜಿಯೋಫಿಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್​ನ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಕಳೆದ ವಾರವಷ್ಟೇ ಉತ್ತರ ಕರ್ನಾಟಕದ ಚಿಂಚೋಳಿ, ವಿಜಯಪುರ ಜಿಲ್ಲೆಯ ಕೆಲಭಾಗಗಳಲ್ಲಿ ಭೂಕಂಪನ ಆಗಿತ್ತು. ಪದೇ ಪದೇ ಈ ರೀತಿಯ ನಡುಕಗಳು ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದು, ಇದು ಅಪಾಯದ ಮುನ್ಸೂಚನೆಯೇ ಎಂದು ಜನರಾಡಿಕೊಳ್ಳುತ್ತಿದ್ದಾರೆ.

Leave a Comment

Your email address will not be published. Required fields are marked *