Ad Widget .

ಪುತ್ತೂರು: ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿಸಿದ ಅನ್ಯಕೋಮಿನ ಯುವಕರ ತಂಡ| ಸ್ಥಳದಲ್ಲಿ ಬಿಗುವಿನ ವಾತಾವರಣ|

ಪುತ್ತೂರು: ವಿದ್ಯಾರ್ಥಿಗಳು ಕಾಲೇಜು ಮುಗಿಸಿ‌ ಮನೆಗೆ ಮರಳುತ್ತಿದ್ದ ವೇಳೆ ಅನ್ಯಕೋಮಿನ ಯುವಕರ ತಂಡವೊಂದು ಏಕಾಎಕಿ ದಾಳಿ ನಡೆಸಿ, ವಿದ್ಯಾರ್ಥಿಗಳನ್ನು ಹಲ್ಲೆಗೈದು ಪರಾರಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.

Ad Widget . Ad Widget .

ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳಾದ ಸಾಲ್ಮರ ನಿವಾಸಿಗಳಾದ ಇಜಾಝ್ ಮತ್ತು ಝಿಯಾದ್ ಎಂದು ಗುರುತಿಸಲಾಗಿದ್ದು ಇವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕರ ತಂಡ ಪರಾರಿಯಾಗಿದೆ‌ ಎನ್ನಲಾಗಿದೆ.

Ad Widget . Ad Widget .

ವಿದ್ಯಾರ್ಥಿಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧಿಸಿದಂತೆ ಪುತ್ತೂರಿನಲ್ಲಿ ಬಿಗುವಿನ ವಾತಾವರಣ ‌ನಿರ್ಮಾಣಗೊಂಡಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *