Ad Widget .

ಆಸಿಯಾ-ಇಬ್ರಾಹಿಂ ಖಲೀಲ್ ಸಂಸಾರ ಗಲಾಟೆಗೆ ಇತಿಶ್ರೀ ಸಮಯ| ಸುದ್ದಿಗೋಷ್ಟಿಯಲ್ಲಿ ಪತಿಯ ಕುರಿತು ಆಸಿಯಾ ಹೇಳಿದ್ದೇನು?

ಮಂಗಳೂರು: ಅ 22 : ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸುಳ್ಯದ ಇಬ್ರಾಹಿಂ ಕಟ್ಟೆಕಾರ್ ಹಾಗೂ ಆಸಿಯಾ ಸಂಸಾರ ಗಲಾಟೆ ಕೊನೆಗೂ ಅಂತ್ಯ ಕಾಣುವತ್ತ ಹೊರಟಿದೆ. ಪತಿಯ ಜೊತೆ ಸಂಸಾರ ಮಾಡಲು ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ಆಸಿಯಾ ಇದ್ದಕ್ಕಿದಂತೆ ತನ್ನ ಹೋರಾಟದಿಂದ ಹಿಂದೆ ಸರಿಯುವ ನಿರ್ಧಾರ‌ ಮಾಡಿದ್ದಾರೆ.

Ad Widget . Ad Widget .

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಸಿಯಾ, ತನ್ನನ್ನು ವಿವಾಹವಾಗಿದ್ದ ಸುಳ್ಯದ ಇಬ್ರಾಹಿಂ ಕಟ್ಟೆಕಾರ್ ಅವರ ಮನ ಒಲಿಸಲು ಸಾಕಷ್ಟು ಪ್ರಯತ್ನ ಪಟ್ಟೆ. ಎರಡು ವರ್ಷ ಇದಕ್ಕಾಗಿ ಸಮಯ ಕೊಟ್ಟೆ. ಇನ್ನು ಅವರಿಗೂ ನನಗೂ ಯಾವುದೇ ಸಂಬಂಧ ಇಲ್ಲ. ನಾನು ಸ್ವತಂತ್ರವಾಗಿ ಜೀವನ ನಡೆಸಲು ನಿರ್ಧರಿಸಿದ್ದೇನೆ. ನಾನಿನ್ನು ಆಸಿಯಾ ಮಾತ್ರ ಎಂದು ತಿಳಿಸಿದ್ದಾರೆ.

Ad Widget . Ad Widget .

ವಿವಿಧ ಹಿಂದು ಹಾಗು ಮುಸ್ಲಿಂ ಸಂಘಟನೆಗಳು, ಅಧಿಕಾರಿಗಳು, ಧಾರ್ಮಿಕ ಮುಖಂಡರು ನಮ್ಮನ್ನೂ ಒಂದು ಮಾಡಲು ಪ್ರಯತ್ನಿಸಿದರು. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ಹೋರಾಟದಿಂದ ಹಿಂದೆ ಸರಿದು ನನ್ನದೇ ಆದ ಸ್ವಂತ ಬದುಕು ಕಟ್ಟಿಕೊಳ್ಳುವುದಾಗಿ ಅವರು ತಿಳಿಸಿದರು

ಕೇರಳದ ಕಣ್ಣೂರಲ್ಲಿ ಕುಟುಂಬಸ್ಥರಿದ್ದು ನಾನು ಹಿಂದು ಧರ್ಮಕ್ಕೆ ಮರಳಿದರೆ ಸೇರಿಸಿಕೊಳ್ಳುವುದಾಗಿ ಹೇಳಿದರು. ಅದಕ್ಕೆ ನಾನು ಒಪ್ಪಿಲ್ಲ. ಸ್ವಲ್ಪ ಸಮಯ ಸುಳ್ಯದಲ್ಲಿದ್ದು ಮತ್ತೆ ಉದ್ಯೋಗಕ್ಕೆ ಸೇರಲು ನಿರ್ಧರಿಸಿದ್ದೇನೆ. ಸಮಾಜ ಸೇವೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಾಗಿ ಆಸಿಯಾ ಹೇಳಿದರು.

ಏನಿದು ಪ್ರಕರಣ ?
ಅಸಿಯಾ ಕೇರಳದ ಕಣ್ಣೂರಿನ ಹಿಂದೂ ಕುಟುಂಬವೊಂದರಲ್ಲಿ ಜನಿಸಿದ್ದು ಆಕೆಗೆ ಶಾಂತಿ ಜೂಬಿ ಎಂದು ಹೆಸರಿಡಲಾಗಿತ್ತು. ಹಿಂದೂ ಧರ್ಮಿಯರೊಬ್ಬರನ್ನು ಆಕೆ ಮದುವೆ ಕೂಡ ಆಗಿದ್ದರು. ಕೆಲ ವರ್ಷಗಳ ಹಿಂದೆ ಆಕೆಗೆ ಸುಳ್ಯದ ಕಟ್ಟೆಕಾರ್‌ ಕುಟುಂಬದ ಇಬ್ರಾಹಿಂ ಎಂಬವರ ಪರಿಚಯ ಫೇಸ್​ಬುಕ್​ನಲ್ಲಿ ಆಗಿತ್ತೆನ್ನಲಾಗಿದೆ. “ಪರಿಚಯ ಪ್ರೀತಿಗೆ ತಿರುಗಿ ಮೊದಲ ಪತಿಯನ್ನು ತೊರೆದು 2017ರಲ್ಲಿ ಮುಸ್ಲಿಂ ಸಂಪ್ರದಾಯದಂತೆ ಖಲೀಲ್ ರನ್ನು ನಿಖಾ ಆಗಿದ್ದೇನೆ ಮದುವೆಗೂ ಮುನ್ನ ಇಸ್ಲಾಂಗೆ ಮತಾಂತರವಾಗಿ ಆಸಿಯಾ ಎಂದು ಹೆಸರು ಬದಲಿಸಿಕೊಂಡಿದೆ” ಎಂದು ಆಸಿಯಾ ಮಾಧ್ಯಮಗಳಿಗೆ ತಿಳಿಸಿದರು.

ಮದುವೆಯಾದ ಮೂರು ವರ್ಷಗಳ ನಂತರ ಇಬ್ರಾಹಿಂ ಏಕಾಏಕಿ ಮನೆಯಿಂದ ನಾಪತ್ತೆಯಾಗಿದ್ದು ಆಕೆ ಪತಿಯನ್ನು ಹುಡುಕಿಕೊಂಡು ಸುಳ್ಯ ಬಂದಿರುವುದಾಗಿಯೂ ಅಲ್ಲಿ ಇಬ್ರಾಹಿಂ ಮನೆಯವರು ತನ್ನನ್ನೂ ಮನೆಯಿಂದ ಹೊರಗೆ ಹಾಕಿದರು ಎಂದು ಆರೋಪಿಸಿ ಆಕೆ ಧರಣಿ ಹೋರಾಟ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದು ಇದು ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿತ್ತು.

Leave a Comment

Your email address will not be published. Required fields are marked *