Ad Widget .

ಧರ್ಮಸ್ಥಳ: ಅ.24ರಂದು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ

Ad Widget . Ad Widget .

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿಯಾಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆಯವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ ಆಚರಣೆ ಅ. 24ರಂದು ರವಿವಾರ ಸರಳವಾಗಿ ನಡೆಯಲಿದೆ.

Ad Widget . Ad Widget .

ಆ ಪ್ರಯುಕ್ತ ದಿನ ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಲಿದೆ. ಬಳಿಕ ಸಂಜೆ 5ಕ್ಕೆ ಮಹೋತ್ಸವ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ತುಮಕೂರಿನ ನಿವೃತ್ತ ಜಿಲ್ಲಾಧಿಕಾರಿ ಸಿ. ಸೋಮಶೇಖರ್‌ ಅಭಿನಂದನ ಭಾಷಣ ಮಾಡುವರು. ಆ ಬಳಿಕ ಡಾ| ಹೆಗ್ಗಡೆಯವರು ಮುಂದಿನ ವರ್ಷದ ಹೊಸ ಯೋಜನೆಗಳನ್ನು ಪ್ರಕಟಿಸುವರು.

ಕಾರ್ಯಕ್ರಮದಲ್ಲಿ ಹಿರಿಯ ನೌಕರರಾದ ಶುಭಚಂದ್ರರಾಜ ಮತ್ತು ತೋಟಗಾರಿಕಾ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿ ಅವರನ್ನು ಹೆಗ್ಗಡೆಯವರು ಸಮ್ಮಾನಿಸುವರು.

ಅಪೂರ್ವ ಸಾಧನೆಗಳ ಸರದಾರ 1968ರ ಅ. 24ರಂದು ನೆಲ್ಯಾಡಿಬೀಡಿನಲ್ಲಿ 21ನೇ ಧರ್ಮಾಧಿಕಾರಿಯಾಗಿ ತನ್ನ 20ನೇ ವರ್ಷದಲ್ಲಿ ಪಟ್ಟಾಭಿಷಿಕ್ತರಾದ ಡಾ| ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ. ವಿನೂತನ ಯೋಜನೆಗಳ ಮೂಲಕ ಡಾ| ಹೆಗ್ಗಡೆಯವರ ಚಿಂತನ-ಮಂಥನದಿಂದ ಯಶಸ್ವಿಯಾಗಿ ಲೋಕಕಲ್ಯಾಣಕ್ಕಾಗಿ ಅನೇಕಾನೇಕ ಸೇವಾ ಕಾರ್ಯಗಳು ಮೂಡಿಬಂದಿವೆ. ಅವರ ಕೆಲವುಯೋಜನೆಗಳಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಮಾನ್ಯತೆ ನೀಡಿ ಅನುಷ್ಠಾನಗೊಳಿಸಿವೆ.

Leave a Comment

Your email address will not be published. Required fields are marked *