ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಮಗಳೂರು. ಹಾಸನ, ಕೊಡಗು ಜಿಲ್ಲೆಗಳಲ್ಲಿ ಅ. 24 ರಿಂದ 27ರವರೆಗೆ ಧಾರಾಕಾರ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ನಾಳೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.