ಪುತ್ತೂರು: ವ್ಯಾಯಾಮದ ನೆಪದಲ್ಲಿ ಸೊಂಟ ಮುಟ್ಟಿದರೆಂಬ ಆರೋಪ| ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಶಿಕ್ಷಕ ಅಂದರ್

ಪುತ್ತೂರು: ವ್ಯಾಯಾಮ ಮಾಡಿಸುವಾಗ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

Ad Widget ... ..

ಪುತ್ತೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ಈ ಶಿಕ್ಷಕ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದರು.

Ad Widget

ಆಕೆಯ ಪೋಷಕರು ಸಂಸ್ಥೆಗೆ ಬಂದು ಆಕೆಯನ್ನು ವಿಚಾರಿಸಿ ಬಳಿಕ ಅ.25ರಂದು ಸಂಜೆ ಘಟನೆಯ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ವಿದ್ಯಾರ್ಥಿನಿ ನೀಡಿದ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ನೇತೃತ್ವದಲ್ಲಿ ಬಂಧಿಸಲಾಗಿದೆ. ವ್ಯಾಯಾಮ‌ ಮಾಡಿಸುವಾಗ ಸೊಂಟವನ್ನು ಸ್ಪರ್ಶಿಸಿದ್ದಾಗಿ‌ ದೂರಿನಲ್ಲಿ ಆರೋಪಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Leave a Comment

Your email address will not be published. Required fields are marked *