Ad Widget .

ಜೆಡಿಎಸ್ ಶಾಸಕ ಎಸ್.ಮಂಜುನಾಥ್ ಬಂಧನ

Ad Widget . Ad Widget .

ಬೆಂಗಳೂರು: ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದ ಮನೆಗಳನ್ನು ನೆಲಸಮ ಮಾಡುವುದನ್ನು ತಡೆಯಲು ಹೋದ ಜೆಡಿಎಸ್ ಪಕ್ಷದ ದಾಸರಹಳ್ಳಿ‌ ಕ್ಷೇತ್ರದ ಶಾಸಕ ಮಂಜುನಾಥ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಇಂದು ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದಂತ ಮನೆಗಳನ್ನೇ, ಪೊಲೀಸರ ನೆರವಿನಿಂದ ಬಿಡಿಎ ಅಧಿಕಾರಿಗಳು ಅಕ್ರಮದ ಹೆಸರಿನಲ್ಲಿ ನೆಲಸಮ ಮಾಡಲು ತೊಡಗಿದ್ದರು.

ಈ ಸಂದರ್ಭದಲ್ಲಿ ಸ್ಥಳಕ್ಕೆ ತೆರಳಿದಂತ ಜೆಡಿಎಸ್ ಶಾಸಕ ಮಂಜುನಾಥ್ ಅವರು ನೆಲಸಮ ಕಾರ್ಯಾಚರಣೆ ಅಡ್ಡಿ ಪಡಿಸಿದ್ದಾರೆ. ಇದರಿಂದ ಸ್ಥಳದಲ್ಲಿದ್ದಂತ ಪೊಲೀಸರು ಅವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಹಿರಿಸಾವೆಯಲ್ಲಿ ಸುದ್ದಿಗಾರರೊಂದಿಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು, ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದ ಮನೆಗಳನ್ನು ನೆಲಸಮ ಮಾಡುವುದನ್ನು ತಡೆಯಲು ಹೋದ ಜೆಡಿಎಸ್ ಪಕ್ಷದ ದಾಸರಹಳ್ಳಿ‌ ಕ್ಷೇತ್ರದ ಶಾಸಕ ಮಂಜುನಾಥ್‌ ಅವರನ್ನು ಪೊಲೀಸರು ಬಂಧಿಸಿರುವುದು ಅತ್ಯಂತ ಖಂಡಿನೀಯ ಎಂದು ಹೇಳಿದರು.

Leave a Comment

Your email address will not be published. Required fields are marked *