Ad Widget .

ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ! – ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯ ಮನವಿ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನವದೆಹಲಿ: ವೈಯಕ್ತಿಕ ಉದ್ದೇಶಕ್ಕಾಗಿ ಸಣ್ಣಪ್ರಮಾಣದ ಡ್ರಗ್ಸ್ ಸೇವಿಸುತ್ತಿರುವ ವ್ಯಕ್ತಿಗಳನ್ನು ಅಪರಾಧದಿಂದ(ಜೈಲು ಶಿಕ್ಷೆಯಿಂದ) ಹೊರಗಡೆ ಇಡುವ ಮಹತ್ವ ಶಿಫಾರಸನ್ನು ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯ ಮಾಡಿದೆ. ಈ ಶಿಫಾರಸನ್ನು ಕೇಂದ್ರ ಕಂದಾಯ ಇಲಾಖೆಗೆ ಕಳಿಸಲಾಗಿದ್ದು, ಮಾದಕ ವಸ್ತು ನಿಗ್ರಹ ಕಾಯ್ದೆಎನ್‍ಡಿಪಿಎಸ್( Narcotic Drugs and Psychotropic Substances Act)ತಿದ್ದು ಪಡಿ ಮಾಡಬೇಕು ಎಂದು ತಿಳಿಸಿದೆ.

Ad Widget . Ad Widget . Ad Widget .

ಇದೀಗ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಇದಕ್ಕೂ ಮುನ್ನ ಕನ್ನಡದ ಚಿತ್ರರಂಗದ ಹಲವು ಕಲಾವಿದರು ಕೂಡಾ ಇದೇ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ಹೀಗಾಗಿ ಈ ಹೊಸ ಪ್ರಸ್ತಾಪಕ್ಕೆ ಮಹತ್ವ ಬಂದಿದೆ.

ಈಗ ಇರುವ ಎನ್‍ಡಿಪಿಎಸ್(NDPS) ಕಾಯ್ದೆ ಪ್ರಕಾರ ಮಾದಕ ವಸ್ತು ವ್ಯಸನಿಗಳನ್ನು ಅಪರಾಧಿಗಳು ಎಂದೇ ಪರಿಗಣಿಸಲಾಗುತ್ತದೆ. ಆದರೆ ತಾವಾಗೇ ಈ ವ್ಯಸನಿಗಳು ಮನಃಪರಿವರ್ತನೆ ಮಾಡಿಕೊಂಡು ಮರುವಸತಿ ಕೇಂದ್ರಗಳಲ್ಲಿ ತಮ್ಮ ಚಟವನ್ನು ಬಿಟ್ಟರೆ ಅವರಿಗೆ ತನಿಖೆ ಹಾಗೂ ಜೈಲಿನಿಂದ ವಿನಾಯ್ತಿ ದೊರಕುತ್ತದೆ.

ಈಗ ಹೊಸ ಪ್ರಸ್ತಾವದ ಪ್ರಕಾರ, ವೈಯಕ್ತಿಕ ಕಾರಣಗಳಿಗೆ ಸಣ್ಣ ಪ್ರಮಾಣದಲ್ಲಿ ಡ್ರಗ್ಸ್ ಸೇವಿಸಿ ಸಿಕ್ಕಿಬಿದ್ದವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಚಿಕಿತ್ಸೆ ಕೊಡಿಸಬೇಕು. ಜೈಲುವಾಸದ ಬಲೆಗೆ ಈ ಆಯ್ಕೆಯುನ್ನು ಅವರಿಗೆ ನೀಡಬೇಕು ಎಂದು ಶಿಫಾರಸಿನಲ್ಲಿ ತಿಳಿಸಲಾಗಿದೆ. ಈಗಿನ ಎನ್‍ಡಿಪಿಎಸ್ ಕಾಯ್ದೆಯ 27ನೇ ಪರಿಚ್ಛೇದ ಹೇಳುವಂತೆ ಯಾವುದೇ ಮಾದಕ ವಸ್ತು ಇಟ್ಟುಕೊಂಡವರಿಗೆ 1ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 20 ಸಾವಿರವರೆಗೆ ದಂಡ ವಿಧಿಸಲಾಗುತ್ತಿದೆ.

Leave a Comment

Your email address will not be published. Required fields are marked *