ಬೆಂಗಳೂರು: ದೀಪಾವಳಿ ಹಬ್ಬದಂದು ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನದಲ್ಲಿ ಗೋಪೂಜೆ ಮಾಡಲು ರಾಜ್ಯ ಸರ್ಕಾರದಿಂದ ಆದೇಶ ನೀಡಿದೆ.

ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ನವೆಂಬರ್ 5ರಂದು ಆಚರಣೆ ಮಾಡುವ ಬಲಿಪಾಡ್ಯಮಿಯಂದು ಗೋವಿನ ಪೂಜೆಯನ್ನು ಅಂದು ಸಂಜೆ 5.30ರಿಂದ 6.30ರ ಗೋಧೂಳಿ ಲಗ್ನದಲ್ಲಿ ಪೂಜೆ ಮಾಡುವಂತೆ ಆದೇಶ ನೀಡಲಾಗಿದೆ.