Ad Widget .

ನಾಳೆಯಿಂದ ನಮ್ಮ ಆಟವೆಂದರೆ‌ ಹಣ ಹಂಚುವುದೇ ಸೋಮಣ್ಣನವರೇ?- ಎಚ್.ಡಿ ಕುಮಾರಸ್ವಾಮಿ ತರಾಟೆ

Ad Widget . Ad Widget .

ವಿಜಯಪುರ: ಇವತ್ತು ಸಾಯಂಕಾಲದ ತನಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಿಂಧಗಿಯಲ್ಲಿ ಫ್ರೀ ಆಗಿ ಬಿಟ್ಟುಬಿಟ್ಟಿದ್ದೇವೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ ಎಂದು ಉಪ ಚುನಾವಣೆ ಬಹಿರಂಗ ಪ್ರಚಾರದ ಅಂತ್ಯವಾಗುವುದಕ್ಕೆ ಮೊದಲು ಹೇಳಿಕೆ ನೀಡಿರುವ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

Ad Widget . Ad Widget .

ಸುದ್ದಿಗಾರರ ಜೊತೆ ಮಾತನಾಡಿದ ಅವರು; “ನಾಳೆಯಿಂದ ನಮ್ಮ ಆಟ ಆರಂಭ ಎಂದರೆ ಅರ್ಥವೇನು? ಆಟ ಎಂದರೆ ದುಡ್ಡು ಹಂಚುವುದಾ?” ಎಂದು ಪ್ರಶ್ನಿಸಿದರು.

ನಿಮ್ಮ ಆಟವನ್ನು ಬರೀ ಚುನಾವಣೆಗಷ್ಟೇ ಸೀಮಿತ ಮಾಡಿಕೊಳ್ಳುತ್ತೀರೋ ಅಥವಾ ಸುಳ್ಳು ಹೇಳಿಕೊಂಡು, ಸುಳ್ಳು ಜಾಹೀರಾತುಗಳನ್ನು ಕೊಟ್ಟುಕೊಂಡು ಐದು ಲಕ್ಷ ಮನೆ ಕೊಟ್ಟೆ, ಆರು ಲಕ್ಷ ಮನೆ ಕೊಟ್ಟೆ ಅಂತ ಹೇಳಿಕೊಂಡು ತಿರುಗ್ತೀರೋ? ಎಂದು ಸೋಮಣ್ಣ ಅವರಿಗೆ ಬಿಸಿ ಮುಟ್ಟಿಸಿದರು.

ಹಿಂದೆ ಐದು ವರ್ಷ ಆಡಳಿತ ನಡೆಸಿದಾಗ ಹಾಗೂ ಈಗ ಎರಡೂವರೆ ವರ್ಷದಿಂದ ಅಧಿಕಾರದಲ್ಲಿರುವ ಬಿಜೆಪಿ ಸರಕಾರದಿಂದ ಸಿಂಧಗಿ ಕ್ಷೇತ್ರಕ್ಕೆ ಯಾವುದೇ ಪ್ರಯೋಜನ ಆಗಿಲ್ಲ. ಈ ಕ್ಷೇತ್ರದತ್ತ ಸಚಿವರುಗಳು ತಲೆ ಹಾಕಿ ಮಲಗಿಲ್ಲ. ಆದರೆ, ನಾಳೆಯಿಂದ ಆಟ ಆಡೀವಿ ಎಂದು ಸಚಿವರು ಹೇಳಿರುವುದು ಬಿಜೆಪಿ ಉಪ ಚುನಾವಣೆಗಳನ್ನು ಹೇಗೆ ಗೆಲ್ಲುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದರು ಅವರು ಅಭಿಪ್ರಾಯಪಟ್ಟರು.

Leave a Comment

Your email address will not be published. Required fields are marked *