ಹಾಸನ: ಇಂದಿನಿಂದ ಹಾಸನಾಂಬೆ ದರ್ಶನ ಆರಂಭವಾಗಲಿದೆ. ವರ್ಷಕ್ಕೊಮ್ಮೆ ಮಾತ್ರ ದರುಶನ ನೀಡುವ ಹಾಸನಾಂಬಾ ದೇವಿ ಇನ್ಮುಂದೆ ಭಕ್ತರಿಗೆ ದರ್ಶನ ಕೊಡಲಿದ್ದಾಳೆ.
ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆ ದೇವಾಲಯ ಬಾಗಿಲು ತೆರೆಯಲಿದೆ. ಬಾಗಿಲು ತೆರೆಯುವ ಮೊದಲ ದಿನ ಮತ್ತು ಬಾಗಿಲು ಹಾಕುವ ಕೊನೆಯ ದಿನ ಭಕ್ತರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಉಳಿದ ಏಳು ದಿನಗಳು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶವಿದೆ
ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಹಾಗೂ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಕೊರೊನಾ ಕಾರಣ ಎರಡು ಲಸಿಕೆ ಪಡೆದಿದ್ದವರಿಗೆ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ. ವ್ಯಾಕ್ಸಿನ್ ಹಾಕಿಸಿಕೊಂಡ ಸರ್ಟಿಫಿಕೇಟ್ ಅಥವಾ ಮೆಸೇಜ್ ತೋರಿಸಬೇಕು.
ದೇವಾಲಯದ ಬಾಗಿಲು ಹಾಕುವಾಗ ಹಚ್ಚಿಟ್ಟ ದೀಪ ವರ್ಷ ಪೂರ್ತಿ ಬೆಳಗುತ್ತದೆ. ಮುಂದಿನ ವರ್ಷ ಬಾಗಿಲು ತೆರೆದಾಗ ದೀಪ ಬೆಳಗುತ್ತಲೇ ಇರುತ್ತದೆ.
ದೇವರಿಗೆ ಇಟ್ಟ ನೈವೇದ್ಯ ಒಂದು ವರ್ಷದ ನಂತರವೂ ಉತ್ತಮವಾಗಿರುತ್ತದೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ದೇವಿಯ ಪವಾಡ ನೋಡಲು ಪ್ರತಿವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.