ಆಗುಂಬೆ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಲಾರಿ: ನಾಲ್ವರು ದುರ್ಮರಣ, ಐವರು ಗಂಭೀರ

ಕಾರ್ಕಳ: ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ದಾರುಣ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಅ.29 ರ ಶುಕ್ರವಾರ ನಡೆದಿದೆ.

Ad Widget ... ..

ಮೃತಪಟ್ಟ ನಾಲ್ವರು ಕಾರ್ಕಳದ ಮಿಯ್ಯಾರಿನವರು ಎಂದು ತಿಳಿದುಬಂದಿದೆ. ಘಟನೆಯ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 9 ನೇ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಚಾಲಕ ನಿಯಂತ್ರಣ ತಪ್ಪಿ ಲಾರಿ ಪ್ರಪಾತಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ. ಈ ಘಟನೆಯಲ್ಲಿ ನಾಲ್ಕು ಮಂದಿ ಸಾವನಪ್ಪಿದ್ದು, ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ಮಣಿಪಾಲು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಏರಿಕೆ ಆಗುವ ಸಾದ್ಯಕೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಆಗುಂಬೆ ಹಾಗು ಹೆಬ್ರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮೇಲಕ್ಕೆತ್ತಲು ಸ್ಥಳೀಯರು ಹಾಗು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *