Ad Widget .

ಮೂಡುಬಿದಿರೆ: ಮೆಕ್ಯಾನಿಕ್ಸ್ V/s ಇಲೆಕ್ಟ್ರಿಕಲ್ ವಿದ್ಯಾರ್ಥಿಗಳ ನಡುವೆ ಡಿಶ್ಯುಂ…ಡಿಶ್ಯು…| 8 ಮಂದಿ ಡಿಬಾರ್

ಮಂಗಳೂರು: ಇಲ್ಲಿಗೆ ಸಮೀಪದ ತೋಡಾರುವಿನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಕಾಲೇಜ್ ಒಂದರಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿಗಳ ಗುಂಪುಗಳ ಮಧ್ಯೆ ಹೊಡೆದಾಟ ನಡೆದು ಇಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಸಹಾಝ್ ಮತ್ತು ಮಹಮ್ಮದ್ ಸ್ವರೂಬ್ ಎಂದು ಗುರುತಿಸಲಾಗಿದೆ. ಇವರು ಸದ್ಯ ಸರಕಾರಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದರೆ.
ಘಟನೆ ಹಿನ್ನೆಲೆ:
ಸಂಪ್ರದಾಯ ದಿನ ಎಂಬ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪೂರ್ವ ತಯಾರಿ ನಡೆಸುತ್ತಿದ್ದರು. ಈ ವೇಳೆ ತೃತೀಯ ವರ್ಷದ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದ ವೇಳೆ ಅಂತಿಮ ವರ್ಷದ ವಿದ್ಯಾರ್ಥಿಗಳ ಗುಂಪು ರ್ಯಾಗಿಂಗ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಮಾತಿಗೆ ಮಾತು ಬೆಳೆದಿದೆ. ಇದನ್ನು ಮುಂದಿಟ್ಟುಕೊಂಡು ಬುಧವಾರ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ.
ಇನ್ನೂ ಬುಧವಾರ ನಡೆದ ಹೊಡೆದಾಟದ ಸಂಬಂಧ ಪ್ರಾಂಶುಪಾಲರು ಉಭಯ ತಂಡಗಳ ತಲಾ 4ರಂತೆ 8 ಮಂದಿಯನ್ನು ನಿನ್ನೆ ಅಮಾನತುಗೊಳಿಸಿ ಮನೆಗೆ ಕಳುಹಿಸಿದ್ದರು. ಮತ್ತೆ ಈ ಗುಂಪು ಕಾಲೇಜಿನ ಹೊರಗಡೆ ಹೊಡೆದಾಟ ನಡೆಸಿದ್ದು, ತೃತೀಯ ವರ್ಷದ ನಾಲ್ಕು ಮಂದಿಯ ಮೇಲೆ ಅಂತಿಮ ವರ್ಷದ ವಿದ್ಯಾರ್ಥಿಗಳ 40 ಮಂದಿಯ ತಂಡ ಹಲ್ಲೆ ನಡೆಸಿದ್ದು, ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕ್ಯಾಂಪಸ್ ಫ್ರಂಟ್ ಜಿಲ್ಲಾ ನಿಯೋಗ ಆಸ್ಪತ್ರೆಗೆ ಭೇಟಿಯಾಗಿ ಹಲ್ಲೆಗೈದ ವಿದ್ಯಾರ್ಥಿಗಳ ವಿರುದ್ಧ ತಕ್ಷಣ ಕ್ರಮಕೈಗೊ ಳ್ಳಲು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡರಾದ ಅರ್ಫಿದ್ ಅಡ್ಕಾರ್, ಮಂಗಳೂರು ನಗರ ಜಿಲ್ಲಾಧ್ಯಕ್ಷ ಶರಫುದ್ದೀನ್, ಗ್ರಾಮಾಂತರ ಅಧ್ಯಕ್ಷ ಅಶ್ರಫ್ ಪೊರ್ಕೊಡಿ, ಕಾರ್ಯದರ್ಶಿ ಸರ್ಫರಾಝ್ ನಿಯೋಗದಲ್ಲಿದ್ದರು.

Ad Widget . Ad Widget .

Leave a Comment

Your email address will not be published. Required fields are marked *