ಪುನಿತ್ ವಿಧಿವಶ ಹಿನ್ನಲೆ| ನಾಳೆ ಖಾಸಗಿ‌ ಶಾಲೆಗಳಿಗೆ ರಜೆ

ಬೆಂಗಳೂರು: ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ರಾಜ್ಯದ ಖಾಸಗಿ ಶಾಲೆಗಳಿಗೆ ರುಪ್ಸಾ ಕರ್ನಾಟಕದಿಂದ ರಜೆ ಘೋಷಣೆ ಮಾಡಲಾಗಿದೆ.

Ad Widget ... ..

ಸರ್ಕಾರಿ ಶಾಲೆಗಳಿಗೆ ರಜೆ ನೀಡುವ ಕುರಿತಾಗಿ ಚರ್ಚೆ ನಡೆದಿದ್ದು, ಶೀಘ್ರವೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Ad Widget

ಇನ್ನು ನಾಳೆ ನಡೆಯಬೇಕಿದ್ದ ಎಂಬಿಎ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ನಟ ಪುನೀತ್ ರಾಜ್ ಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಎಂಬಿಎ ಅಂತಿಮ ವರ್ಷದ ಪರೀಕ್ಷೆಗಳನ್ನು ಮಂಗಳವಾರಕ್ಕೆ ಮುಂಡೂಡಲಾಗಿದೆ ಎಂದು ಬೆಂಗಳೂರು ಸಿಟಿ ವಿವಿ ಕುಲಪತಿ ಲಿಂಗರಾಜು ತಿಳಿಸಿದ್ದಾರೆ.

Leave a Comment

Your email address will not be published. Required fields are marked *