Ad Widget .

ಪುನಿತ್ ರಾಜ್ ಕುಮಾರ್ ಆರೋಗ್ಯ ಗಂಭೀರ| ಆಸ್ಪತ್ರೆಗೆ ಸಿಎಂ ಭೇಟಿ

Ad Widget . Ad Widget .

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಜಿಮ್ ನಲ್ಲಿ ಕಸರತ್ತು ನಡೆಸುತ್ತಿರುವಂತ ಸಂದರ್ಭದಲ್ಲಿ, ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Ad Widget . Ad Widget .

ಇಂದು ನಟ ಪುನೀತ್ ರಾಜ್ ಕುಮಾರ್ ಅವರು ಜಿಮ್ ನಲ್ಲಿ ಕಸರತ್ತು ನಡೆಸುತ್ತಿದ್ದಂತ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಇಂತಹ ಅವರ ಆರೋಗ್ಯ ಸ್ಥಿತಿ ಗಂಭೀರ ಎಂದು ತಿಳಿದು ಬಂದಿದೆ.

ಇದೀಗ ಆಸ್ಪತ್ರೆಗೆ ಚಿತ್ರರಂಗದ ನಟರು ನಿರ್ದೇಶಕರು ಹಾಗೂ ನಿರ್ಮಾಪಕರು ಬರುತ್ತಿದ್ದಾರೆ. ಅವರ ನಿವಾಸ ಹಾಗೂ ಆಸ್ಪತ್ರೆಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.

ಸದ್ಯ ಮಾಧ್ಯಮಗಳಿಗೆ ಮಾಹಿತಿ‌ ನೀಡಿದ ವಿಕ್ರಂ ಆಸ್ಪತ್ರೆ ವೈದ್ಯ ಡಾ| ರಂಗನಾಥ್ ಪುನಿತ್ ಆರೋಗ್ಯ ತೀವ್ರ ಗಂಭೀರತೆಯಿಂದ ಕೂಡಿದ್ದು, ಸದ್ಯ ಏನೂ ಹೇಳಲಾಗದು. ಚಿಕಿತ್ಸೆ ಮುಂದುವರಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *