Ad Widget .

ಇಂದು ಸಂಜೆ ಪುನೀತ್ ಅಂತ್ಯ ಸಂಸ್ಕಾರಕ್ಕೆ ನಿರ್ಧಾರ| ಆಪ್ತ ವಲಯಕ್ಕಷ್ಟೇ ಭಾಗವಹಿಸಲು ಅವಕಾಶ|

Ad Widget . Ad Widget .

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದ್ದು, ಇಂದು ಸಂಜೆಯೇ ಪುನೀತ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

Ad Widget . Ad Widget .

ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದು, ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 6-6.30ರ ಸುಮಾರಿಗೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆಂದು ಹೇಳಲಾಗುತ್ತಿದೆ.

ನೆಚ್ಚಿನ ನಟನ ಅಂತಿಮ ದರ್ಶನವನ್ನು ಪಡೆಯಲು ಅಭಿಮಾನಿಗಳಿಗೆ ಇಂದು ಮಧ್ಯಾಹ್ನ 3 ಗಂಟೆಯವರಿಗೂ ವ್ಯವಸ್ಥೆಗೊಳಿಸಲಾಗಿದ್ದು, ನಂತರ ಕಂಠೀರವ ಸ್ಟುಡಿಯೋದವರೆಗೂ ಮೆರವಣಿಗೆ ನಡೆಸಲಾಗುತ್ತದೆ. ಹೀಗಾಗಿ ಕುಟುಂಬಸ್ಥರು 3 ಗಂಟೆಯ ಬಳಿಕ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಬರದಂತೆ ಮನವಿ ಮಾಡಿದ್ದಾರೆ.

ಪುನೀತ್ ಪುತ್ರಿ ಧ್ರುತಿ ನ್ಯೂಯಾರ್ಕ್‍ನಿಂದ ದೆಹಲಿಗೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಸಂಜೆ 4.15ಕ್ಕೆ ಆಗಮಿಸಲಿದ್ದಾರೆ. ಧ್ರುತಿ ಅವರು ಬಂದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇವಲ ಆಪ್ತವಲಯಕ್ಕಷ್ಟೇ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *