October 2021

ಪುತ್ತೂರು: ಹೊಸಬಟ್ಟೆ ಧರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ| ಕಾರಣ ನಿಗೂಢ

ಮಂಗಳೂರು: ಕೃಷಿಕ ದಂಪತಿಗಳು ಹೊಸ ಬಟ್ಟೆ ಧರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ಘಟನೆ ನಡೆದಿದೆ. ಪಾದೆಕರ್ಯದ ನಿವಾಸಿಗಳಾದ ಕೃಷಿಕ ಸುಬ್ರಹ್ಮಣ್ಯ ಭಟ್ (65) ಮತ್ತು ಶಾರಾದ (50) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು. ಇವರಿಬ್ಬರು ರಾತ್ರಿ ತಮ್ಮ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ಮಕ್ಕಳು ಬಾಗಿಲು ತೆಗೆದು ನೋಡಿದಾಗ ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇವರು ಹೊಸ ಬಟ್ಟೆ ಧರಿಸಿಕೊಂಡು ಆತ್ಮಹತ್ಯೆ […]

ಪುತ್ತೂರು: ಹೊಸಬಟ್ಟೆ ಧರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ| ಕಾರಣ ನಿಗೂಢ Read More »

ಸುಳ್ಯ : ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂವರು ಗಂಭೀರ

ಸುಳ್ಯ : ಅಡ್ಕಾರ್ ಮಾವಿನ ಕಟ್ಟೆಯಲ್ಲಿ ಕಾರು ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಭವಿಸಿದೆ. ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದ ಹಾಗೂ ವೇಗವಾಗಿ ಬಂದ ಹಿನ್ನೆಲೆ ಚಾಲಕ ನಿಯಂತ್ರಣ ಕಳೆದು ಕೊಂಡಿದ್ದಾನೆ, ಬಳಿಕ ಕಾರು ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.ಇದೇ ವೇಳೆ ಕಾರಿನಲ್ಲಿ ಇದ್ದ ಮೂವರು ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಮೈಸೂರಿನ ಶ್ರೇಯಸ್ಸ್, ಭುವನ್ ಹಾಗೂ ಸರ್ವೇಶ್ ಎಂದು ಗುರುತಿಸಲಾಗಿದೆ, ಅವರು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಳ್ಯ : ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂವರು ಗಂಭೀರ Read More »

ತೈಲಬೆಲೆ ಇಳಿಕೆಯ ಸೂಚನೆ ನೀಡಿದ ಸಿಎಂ|

ಹುಬ್ಬಳ್ಳಿ: ತೈಲ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಬೆಲೆ ಕಡಿಮೆ ಮಾಡುವ ಅವಕಾಶಗಳಿದ್ದರೂ, ಇನ್ನೂ ಬೆಲೆ ಇಳಿಕೆ ಮಾಡಿಲ್ಲ. ತಮಿಳುನಾಡಿನಲ್ಲಿ ಈಗಾಗಲೇ ರಾಜ್ಯ ಸರ್ಕಾರವೇ ಪೆಟ್ರೋಲ್ ಬೆಲೆ ಏರಿಕೆಯ ದರವನ್ನು ಇಳಿಸಿದೆ. ಈ ನಡುವೆ ಉಪ ಚುನಾವಣೆಯ ಬಳಿಕ ತೈಲ ಬೆಲೆ ಇಳಿಸುವ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ತೈಲ ಬೆಲೆಯು ರಾಜ್ಯದ ಆರ್ಥಿಕತೆಯ ಮೇಲೆ ಅವಲಂಬಿತವಾಗಿದೆ. ದರ ಇಳಿಸುವ ಬಗ್ಗೆ ಉಪ ಚುನಾವಣೆಯ ಬಳಿಕ ಪುನರವಲೋಕನ ಮಾಡುತ್ತೇನೆ. ಆರ್ಥಿಕ

ತೈಲಬೆಲೆ ಇಳಿಕೆಯ ಸೂಚನೆ ನೀಡಿದ ಸಿಎಂ| Read More »

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸರಳವಾಗಿ ಈದ್ ಮಿಲಾದ್ ಆಚರಣೆಗೆ ಡಿಸಿ ಸೂಚನೆ – ಸಾಮೂಹಿಕ ಮೆರವಣಿಗೆಳು ನಿಷೇಧ

ಮಂಗಳೂರು: ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಸರಳವಾಗಿ ಈದ್ ಮಿಲಾದ್ ಆಚರಣೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ. ಸುರಕ್ಷಿತ ಅಂತರ ಹಾಗೂ ಕೋವಿಡ್ ನಿಯಾಮಾವಳಿಗಳನ್ನು ಪಾಲಿಸಿಕೊಂಡು ಮಸೀದಿ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಒಂದು ವೇಳೆ ಹೆಚ್ಚು ಜನ ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದು . ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ, ಡಿಜಿಟಲ್ ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ. ಪ್ರಾರ್ಥನಾ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸತಕ್ಕದ್ದು. 60 ವರ್ಷ ಮೇಲ್ಪಟ್ಟ ನಾಗರಿಕರು

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸರಳವಾಗಿ ಈದ್ ಮಿಲಾದ್ ಆಚರಣೆಗೆ ಡಿಸಿ ಸೂಚನೆ – ಸಾಮೂಹಿಕ ಮೆರವಣಿಗೆಳು ನಿಷೇಧ Read More »

ವೈದ್ಯರ ನಿರ್ಲಕ್ಷ್ಯದಿಂದ ಪ್ರೈವೇಟ್ ಪಾರ್ಟ್ ಡ್ಯಾಮೇಜ್| ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು ಅಚಾತುರ್ಯ|

ಚಿಕ್ಕಮಗಳೂರು: ಆಪರೇಷನ್ ಗೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬರ ಖಾಸಗಿ ಅಂಗಕ್ಕೆ ಗಾಯಗೊಳಿಸಿರುವ ಘಟನೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಗಾಯಗೊಂಡಿರುವ ಗಾಯಾಳು ಪೊಲೀಸರ ಮೊರೆ ಹೋಗಿದ್ದಾರೆ. ಹರ್ನಿಯಾ ಆಪರೇಷನ್ ಗೆಂದು ಅಕ್ಟೋಬರ್ 12ರಂದು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಯೋಗೇಂದ್ರ ಎಂಬವರು ದಾಖಲಾಗಿದ್ದು, ಆಪರೇಷನ್ ವೇಳೆಯಲ್ಲಿ ಅವರ ಖಾಸಗಿ ಅಂಗಕ್ಕೆ ಪೈಪ್ ಸಿಕ್ಕಿಸಲಾಗಿತ್ತು.ತೀವ್ರ ತರವಾಗಿ ಪೈಪ್ ಚುಚ್ಚಿದ್ದರಿಂದ ಅವರ ಖಾಸಗಿ ಅಂಗಕ್ಕೆ ಗಾಯವಾಗಿತ್ತು. ಈ ಬಗ್ಗೆ ಅವರು ಆಸ್ಪತ್ರೆ ಸಿಬ್ಬಂದಿ ಸಹಿತ ವೈದ್ಯರ ಬಳಿಯಲ್ಲಿ ವಿಚಾರಿಸಿದಾಗ ಉಡಾಫೆಯಾಗಿ ಉತ್ತರಿಸಿದ್ದು

ವೈದ್ಯರ ನಿರ್ಲಕ್ಷ್ಯದಿಂದ ಪ್ರೈವೇಟ್ ಪಾರ್ಟ್ ಡ್ಯಾಮೇಜ್| ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು ಅಚಾತುರ್ಯ| Read More »

ಮಂಗಳೂರು: ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಕೊಲೆ ಪ್ರಕರಣ – ನಾಲ್ವರು ಪೊಲೀಸ್ ವಶಕ್ಕೆ

ಮಂಗಳೂರು: ನಗರದ ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಪಾರ್ಟಿ ನೆಪದಲ್ಲಿ ಯುವಕನೊಬ್ಬನ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುರತ್ಕಲ್ ನಿವಾಸಿ ಜೇಸನ್ (25) ವಶಕ್ಕೆ ಪಡೆದ ಆರೋಪಿ. ಅ.15 ರಂದು ರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್,ಪ್ರಜ್ವಲ್ ಎಂಬವರು ತೆರಳಿದ್ದರು. ಸರಿಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್ ಮತ್ತು ಧನುಷ್ ಎಂಬುವರ ಮಧ್ಯೆ

ಮಂಗಳೂರು: ಪಂಪ್‌ವೆಲ್‌ ನ ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಕೊಲೆ ಪ್ರಕರಣ – ನಾಲ್ವರು ಪೊಲೀಸ್ ವಶಕ್ಕೆ Read More »

ಮಾಜಿ ಕ್ರಿಕೆಟ್ ತಾರೆ ಯುವರಾಜ್ ಸಿಂಗ್ ಬಂಧನ

ನವದೆಹಲಿ: ಜಾತಿ ನಿಂದನೆ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ರೋಹಿತ್ ಶರ್ಮಾ ಜೊತೆಗಿನ ಸಂವಾದದಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಯುವಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಪೊಲೀಸ್ ಠಾಣೆಯಲ್ಲಿ ಯುವರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿರುವ ಹಂಸಿ ಠಾಣಾ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸಿದರು. ಆ ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್

ಮಾಜಿ ಕ್ರಿಕೆಟ್ ತಾರೆ ಯುವರಾಜ್ ಸಿಂಗ್ ಬಂಧನ Read More »

ದ.ಕ ದಲ್ಲಿ‌ ಕೊರೊನಾ ಮಾರ್ಗಸೂಚಿ ಕಟ್ಟುನಿಟ್ಟು| ಎರಡು ಡೋಸ್ ಲಸಿಕೆ ಹಾಕಿಸದವರಿಗೆ‌ ಮಾಲ್, ಚಿತ್ರಮಂದಿರಕ್ಕೆ ನಿರ್ಬಂಧ

ಮಂಗಳೂರು: ಮಂಗಳೂರಿನಲ್ಲಿ ಮಾಲ್‌ಗಳು, ಚಿತ್ರಮಂದಿರಗಳು, ಸಭಾಂಗಣಗಳ ಒಳಗೆ ಪ್ರವೇಶಿಸಲು ಕೊರೋನಾ ಲಸಿಕೆಯ ಎರಡು ಡೋಸ್‌ ಹಾಕಿಕೊಳ್ಳುವುದು ಕಡ್ಡಾಯ ಎಂದು ದಕ್ಷಿಣ ಕನ್ನಡ ಡಿಸಿ ಡಾ.ರಾಜೇಂದ್ರ ಕೆವಿ ಹೇಳಿದ್ದಾರೆ. ಕೋವಿಡ್ ಪಾಸಿಟಿವಿಟಿ ದರ ಶೇಕಡ 0.46ಕ್ಕೆ ಇಳಿದಿರುವುದರಿಂದ ಅಕ್ಟೋಬರ್ 14ರಿಂದ ಥಿಯೇಟರ್‌ಗಳು, ಮಲ್ಟಿಪ್ಲೆಕ್ಸ್‌ಗಳು, ಆಡಿಟೋರಿಯಂಗಳು 100 ಪ್ರತಿಶತ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ. ಆದ್ದರಿಂದ, ಈ ಸ್ಥಳಗಳಿಗೆ ಭೇಟಿ ನೀಡುವ ಎಲ್ಲ ಜನರು ಎರಡು ಡೋಸ್ ಲಸಿಕೆಗಳನ್ನು ತೆಗೆದುಕೊಳ್ಳಬೇಕು. ಆದರೆ ವಯಸ್ಸಾದವರು ಮತ್ತು

ದ.ಕ ದಲ್ಲಿ‌ ಕೊರೊನಾ ಮಾರ್ಗಸೂಚಿ ಕಟ್ಟುನಿಟ್ಟು| ಎರಡು ಡೋಸ್ ಲಸಿಕೆ ಹಾಕಿಸದವರಿಗೆ‌ ಮಾಲ್, ಚಿತ್ರಮಂದಿರಕ್ಕೆ ನಿರ್ಬಂಧ Read More »

ಅರಬ್ಬಿ‌ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಏಕಕಾಲಕ್ಕೆ ವಾಯುಭಾರ ಕುಸಿತ| ಕೇರಳ, ಕರ್ನಾಟಕ, ಆಂದ್ರದಲ್ಲಿ ಎಡೆಬಿಡದ ಮಳೆ| ಜನಜೀವನ ದುಸ್ಥರ

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಏಕಕಾಲಕ್ಕೆ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಕೇರಳ ಹಾಗೂ ಆಂದ್ರ ಪ್ರದೇಶದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಮುನ್ಸೂಚನೆ ಪ್ರಕಾರ ಇನ್ನೂ ಎರಡು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ. ಕಳೆದ ಎಂಟತ್ತು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಸಂಜೆ ಹಾಗೂ ರಾತ್ರಿ ವೇಳೆ ಮಳೆ ಆರಂಭವಾಗಿ ಕೆಲವೆಡೆ ಸಾಧಾರಣ ಮತ್ತೆ ಕೆಲವೆಡೆ ಭಾರೀ ಮಳೆಯಾಗಿದೆ. ಇಂದು ಬೆಳಗ್ಗೆ

ಅರಬ್ಬಿ‌ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಏಕಕಾಲಕ್ಕೆ ವಾಯುಭಾರ ಕುಸಿತ| ಕೇರಳ, ಕರ್ನಾಟಕ, ಆಂದ್ರದಲ್ಲಿ ಎಡೆಬಿಡದ ಮಳೆ| ಜನಜೀವನ ದುಸ್ಥರ Read More »

ಖಾಝಿ ನೇಮಕ ವಿಚಾರ| ಮಸೀದಿಯೊಳಗೇ ಹೊಡೆದಾಟ‌ ನಡೆಸಿದ ಮುಖಂಡರು|

ಪುತ್ತೂರು: ಖಾಝಿ ನೇಮಕ ವಿಚಾರದಲ್ಲಿ ತಕರಾರು ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮಸೀದಿ ಒಳಗೆ ಮತ್ತು ಹೊರಗಡೆ ತಳ್ಳಾಟ, ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸೆರೆಯಾಗಿದ್ದು ವೈರಲ್ ಆಗಿದೆ.‌ ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ ಮದ್ರಸದಲ್ಲಿ ಘಟನೆ ನಡೆದಿದೆ. ಖಾಝಿ ನೇಮಕ ವಿಚಾರದಲ್ಲಿ ನಡೆದ ಜಮಾತ್ ಕಮಿಟಿ ಸಭೆಯಲ್ಲಿ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ತಂಙಳ ಅವರನ್ನು ಪುತ್ತೂರು ತಾಲೂಕು ಸಂಯುಕ್ತ ಖಾಝಿಯಾಗಿ ನೇಮಿಸುವ ಕುರಿತಾಗಿ ಕೆಲವರು ಆಕ್ಷೇಪ

ಖಾಝಿ ನೇಮಕ ವಿಚಾರ| ಮಸೀದಿಯೊಳಗೇ ಹೊಡೆದಾಟ‌ ನಡೆಸಿದ ಮುಖಂಡರು| Read More »